














ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವಕ್ಕೆ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಮಾಹಿತಿ ಕೇಂದ್ರ ತೆರೆಯಲಾಯಿತು. ಮಾಹಿತಿ ಕೇಂದ್ರವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ದೀಪ ಬೆಳಗಿಸಿ ಉದ್ಘಾಟಿಸಿದರು..ಕಾರ್ಯಕ್ರಮದಲ್ಲಿ ಜೇಸಿಐ ಪಂಜ ಪಂಚಶ್ರೀ ಅಧ್ಯಕ್ಷ ವಾಚಣ್ಣ ಕೆರೆಮೂಲೆ ,,ಕಾರ್ಯದರ್ಶಿ ಜೇಸಿ ಅಶ್ವಥ್ ಬಾಬ್ಲುಬೆಟ್ಟು, ಮಾಹಿತಿ ಕೇಂದ್ರ ನಿರ್ದೇಶಕರಾದ ಜೇಸಿ ದೇವಿ ಪ್ರಸಾದ್ ಚಿಕ್ಮುಳಿ ಮತ್ತು ಜೇಸಿ ಗಗನ್ ಕಿನ್ನಿಕುಮೇರಿ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರು ಜೇಸಿ ಜಯರಾಮ ಕಲ್ಲಾಜೆ ಸ್ವಾಗತಿಸಿ, ವಂದಿಸಿದರು.ಎಲ್ಲಾ ಪೂರ್ವಾಧ್ಯಕ್ಷರು, ಸರ್ವ ಸದಸ್ಯರು ಉಪಸ್ಥಿತರಿದ್ದರು.










