

















ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಾಲಯದ ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ಫೆ.9.ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಪೂಜೆ ಹಾಗೂ ಶಿರಾಡಿ ದೈವ ನೇಮ, ಶ್ರೀ ರುದ್ರ ಚಾಮುಂಡಿ ದೈವದ ನೇಮ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿ ಪ್ರಸಾದ್ ಕಾನತ್ತೂರ್, ವ್ಯವಸ್ಥಾಪನಾ ಸಮಿತಿ ಸದಸ್ಯರು, ಉತ್ಸವ ಸಮಿತಿ ಸಂಚಾಲಕರು, ಸದಸ್ಯರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡಿದ್ದರು.










