ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಅಡಿಕೆ ಎಲೆಚುಕ್ಕೆ ರೋಗಗಳ ಸಮಗ್ರ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರವು ಸಹಕಾರಿ ಸಂಘದ ರೈತಸಭಾಭವನದಲ್ಲಿ ಫೆ.11ರಂದು ಬೆಳಿಗ್ಗೆ ನಡೆಯಿತು.
















ಸಹಕಾರಿ ಸಂಘದ ಅಧ್ಯಕ್ಷರಾದ ಸುಧಾಕರ ಕಾಮತ್ ಅವರು ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಇಂದೋರ್ ಸಸ್ಯ ಪೋಷಕ ಸಂಸ್ಥೆಯ ಮುಖ್ಯ ಕಾರ್ಯಪಾಲನ ನಿರ್ದೇಶಕರಾದ ಪೆರುವೋಡಿ ನಾರಾಯಣ ಭಟ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಅಡಿಕೆಯ ವಿವಿಧ ತಳಿಗಳಿಗೆ ಬಾಧಿಸುವ ಹಳದಿ ಎಲೆರೋಗ, ಎಲೆಚುಕ್ಕಿ ರೋಗಗಳನ್ನು ನಿಯಂತ್ರಿಸಲು ಇರುವ ರೋಗನಾಶಕಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ಸಹಾಯಕ ತೋಟಗಾರಿಕಾ ಅಧಿಕಾರಿ ಅರ್ಬಣ್ಣ ಪೂಜಾರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಅಡಿಕೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗಗಳ ನಿರ್ವಹಣೆಗೆ ತೋಟಗಾರಿಕಾ ಇಲಾಖೆಯಿಂದ ದೊರಕುವ ಸೌಲಭ್ಯಗಳ ಕುರಿತು ಹಾಗೂ ಹಣ್ಣಿನ ತಳಿಗಳಾದ ರಂಬೂಟಾನ್ , ಮ್ಯಾಂಗೋಸ್ಟೀನ್ , ಡ್ರಾಗನ್ ಪ್ರೂಟ್ ಜೊತೆಗೆ ವಿವಿಧ ತರಕಾರಿ ಬೆಳೆಗಳನ್ನು ಪರ್ಯಾಯ ಬೆಳೆಯಾಗಿ ಬೆಳೆಸುವ ಕುರಿತಂತೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ವೆಂಕಪ್ಪ ನಾಯ್ಕ ದೇರ್ಕಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳು, ಮಾಜಿ ಅಧ್ಯಕ್ಷರುಗಳು, ಮಾಜಿ ಉಪಾಧ್ಯಕ್ಷರುಗಳು, ಮಾಜಿ ನಿರ್ದೇಶಕರುಗಳು, ಸಿಬ್ಬಂದಿ ವರ್ಗದವರು ಸೇರಿದಂತೆ ಕನಕಮಜಲು ಮತ್ತು ಜಾಲ್ಸೂರು ಗ್ರಾಮದ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.










