ಪಯಸ್ವಿನಿ ನದಿ ನೀರಿನಲ್ಲಿ ಮೀನುಗಳ ಮಾರಣ ಹೋಮ

0

ಕಳೆದ ಎರಡು ದಿನಗಳಿಂದ ಸುಳ್ಯ ಪಯಶ್ವಿನಿ ನದಿಯಲ್ಲಿ ಮೀನುಗಳ ಮಾರಣ ಹೋಮ ನಡೆಯುತಿದ್ದು ಈ ಬಗ್ಗೆ ಘಟನಾ ಸ್ಥಳಕ್ಕೆ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷೆ ಕಿಶೋರಿ ಶೇಟ್ ಹಾಗೂ ಮುಖ್ಯ ಅಧಿಕಾರಿ ಸುಧಾಕರ್ ರವರು ಫೆ. 10 ರಂದು ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಾಂತಮಂಗಲ ಸೇತುವೆ ಸಮೀಪದಲ್ಲಿ ಸತ್ತು ಬಿದ್ದಿರುವ ಮೀನುಗಳ ರಾಶಿಯನ್ನು ನೋಡಿ ಆತಂಕ ವ್ಯಕ್ತ ಪಡಿಸಿದ ಅವರು ಕೂಡಲೇ ಸುಳ್ಯ ಠಾಣೆಗೆ ಮಾಹಿತಿ ನೀಡಿ ಈ ಬಗ್ಗೆ ತನಿಖೆ ನಡೆಸುವಂತೆ ಪತ್ರ ಮುಖೇನ ಮನವಿ ನೀಡಿರುವುದಾಗಿ ಮತ್ತು ನದಿಯ ನೀರಿನ ಸ್ಯಾಂಪಲ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಿರುವುದಾಗಿ ಅಧ್ಯಕ್ಷರು ಸುದ್ದಿಗೆ ತಿಳಿಸಿದ್ದಾರೆ.

ಅಲ್ಲದೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಷ್ಥರ ಮೇಲೆ ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳ ಗಮನಕ್ಕೆ ನೀಡುವ ಬಗ್ಗೆಯೂ ತಿಳಿಸಿದ್ದಾರೆ.