ಸ್ಥಳಕ್ಕೆ ಲೋಕಾಯುಕ್ತ ಎಸ್‌ಪಿ ಭೇಟಿ , ಗ್ರಾಮ ಲೆಕ್ಕಾಧಿಕಾರಿಗಳ ಅಹವಾಲು ಸ್ವೀಕಾರ
ಗ್ರಾಮ ಆಡಳಿತಾಧಿಕಾರಿಗಳ ರಾಜ್ಯಾದ್ಯಂತ ಅನಿರ್ದಿಷ್ಟವಾಧಿ ಪ್ರತಿಭಟನೆ ನಡೆಸುತ್ತಿದ್ದು ಫೆ. ೧೨ ರಂದು ಮೂರನೇ ದಿನಕ್ಕೆ ಮುಂದುವರೆದಿದೆ.
ಸುಳ್ಯ ತಾಲೂಕು ಕಛೇರಿ ಮುಂಭಾಗದಲ್ಲಿ ನಡೆಯುತ್ತಿರುವ ಗ್ರಾಮ ಆಡಳಿತಾಧಿಕಾರಿಗಳ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಲೋಕಾಯುಕ್ತ ಎಸ್ ಪಿ ನಟರಾಜ್ ಎಂ ಎ ಅಹವಾಲು ಸ್ವೀಕರಿಸಿ ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಗಮನ ಸೆಳೆದು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಿದ್ದು ನಿಮ್ಮ ಅಹವಾಲುಗಳು ನೈಜವಾಗಿದ್ದು ಇದನ್ನು ಸರಕಾರಕ್ಕೆ ನಿಮ್ಮ ಪರವಾಗಿ ನಾವು ಮಾಹಿತಿ ನೀಡುವುದಾಗಿ ತಿಳಿಸಿದರು.









ಈ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿಗಳಿಗೆ ಗ್ರಾಮಗಳ ಕೆಲವು ಕಡೆಗಳಲ್ಲಿ ಶೌಚಾಲಯದ ವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂದು ಸಮಸ್ಯೆಗಳನ್ನು ಹೇಳಿಕೊಂಡರು.
ನಮಗೆ ಕಛೇರಿ , ಕಂಪ್ಯೂಟರ್ ,ಪ್ರಿಂಟರ್ ಸೇರಿದಂತೆ ಸಮಾಗ್ರಿಗಳನ್ನು ಒದಗಿಸಿ ಕೊಡುವಂತೆ ಬೇಡಿಕೆ ಇದ್ದು ಇದಕ್ಕೆ ಅನುಗುಣವಾಗಿ ಕೆಲಸ ಮಾಡುತ್ತಿದ್ದೆವೆ ಎಂದು ಲೋಕಾಯುಕ್ತ ಅಧಿಕಾರಿಗೆ ಗ್ರಾಮ ಆಡಳಿತಾಧಿಕಾರಿಗಳು ಹೇಳಿಕೊಂಡರು.
ಅಹವಾಲು ಸ್ವೀಕರಿಸಿದ ಅವರು ಸರಕಾರ ಹಾಗೂ ಹಿರಿಯ ಅಧಿಕಾರಿಗಳ ಗಮನ ಸೆಳೆಯುವುದಾಗಿ ಗ್ರಾಮ ಅಧಿಕಾರಿಗಳಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುಳಾರವರು ಉಪಸ್ಥಿತರಿದ್ದರು.










