ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಶಾಲೆಯ ಶತಮಾನೋತ್ಸವದ ಅಭಿವೃದ್ಧಿ ಕಾರ್ಯಕ್ಕೆ ಒಂದೂವರೆ ಲಕ್ಷ ಅನುದಾನದ ಮಂಜೂರಾತಿ ಪತ್ರ ವಿತರಣೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದೇವಚಳ್ಳ ಶಾಲೆಯ ಶತಮಾನೋತ್ಸವದ ಅಭಿವೃದ್ಧಿ ಕಾರ್ಯಕ್ಕೆ ಒಂದೂವರೆ ಲಕ್ಷ ಅನುದಾನದ ಮಂಜೂರಾತಿ ಪತ್ರ ವಿತರಣೆಯು ಇಂದು ದೇವಚಳ್ಳ ಶಾಲಾ ವಠಾರದಲ್ಲಿ ನಡೆಯಿತು.

ಶಾಲಾ ಮೇಲುಸ್ತುವಾರಿ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಜಯಾನಂದ ಪಟ್ಟೆ ಅಧ್ಯಕ್ಷತೆ ವಹಿಸಿದ್ದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ರವರು ಒಂದೂವರೆ ಲಕ್ಷ ರೂಪಾಯಿಗಳ ಮಂಜೂರಾತಿ ಪತ್ರವನ್ನು ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎ. ವಿ. ತೀರ್ಥರಾಮ ರವರಿಗೆ ಹಸ್ತಾಂತರಿಸಿದರು.

ಬಳಿಕ ಮಾತನಾಡಿದ ಯೋಜನಾಧಿಕಾರಿಗಳು
“ಶಾಲಾ ಪರಿಸರ ಉತ್ತಮವಾಗಿದ್ದರೆ ಅಲ್ಲಿಯ ಶಿಕ್ಷಣವೂ ಗುಣಮಟ್ಟದ್ದಾಗಿರುತ್ತದೆ. ಈ ನಿಟ್ಟಿನಲ್ಲಿ ಪೂಜ್ಯ ಖಾವಂದರ ಆಶಾಯದಂತೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯಲು ಯೋಜನೆಯ ವತಿಯಿಂದ ಅನೇಕ ಸವಲತ್ತು ವಿತರಿಸಲಾಗುತ್ತಿದೆ. ಇಂದು ಶತಮಾನೋತ್ಸವದ ಪ್ರಯುಕ್ತ ಕೊಡಲಾದ ಅನುದಾನ ಶತ ವರ್ಷ ಪೂರೈಸಿದ ಶಾಲೆಗೆ ಪ್ರಯೋಜನವಾಗಲಿ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ಜನಜಾಗೃತಿ ವೇದಿಕೆ ಗುತ್ತಿಗಾರು ವಲಯದ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ, ಸುಳ್ಯ ತಾಲೂಕು ಜನಜಾಗೃತಿ ವೇದಿಕೆ ಸದಸ್ಯರಾದ ಬಾಬು ಮಾಸ್ಟರ್ ಅಚ್ರಪ್ಪಾಡಿ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಗುತ್ತಿಗಾರು ಒಕ್ಕೂಟದ ಅಧ್ಯಕ್ಷ ಯೋಗೀಶ್ ದೇವ, ಮಾವಿನಕಟ್ಟೆ ವಲಯದ ಒಕ್ಕೂಟಧ್ಯಕ್ಷ ಭಾನುಪ್ರಕಾಶ್ ತಳೂರು ವೇದಿಕೆಯಲ್ಲಿದ್ದರು.

ಗುತ್ತಿಗಾರು ವಲಯ ಮೇಲ್ವಿಚಾರಕ ಬಾಲಕೃಷ್ಣ ಗೌಡ ಕೆ.ರವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಮುಖ್ಯ ಶಿಕ್ಷಕರಾದ ಶ್ರೀಧರ ಗೌಡ ವಂದಿಸಿದರು.

ಕಾರ್ಯಕ್ರಮದಲ್ಲಿ ಪೂರ್ವ ಪ್ರಾಥಮಿಕ ಶಾಲಾ ಪೋಷಕರ ಸಮಿತಿ ಅಧ್ಯಕ್ಷ ರಾಜೇಶ್ ಬಟ್ಟೆಕಜೆ, ಸೇವಾಪ್ರತಿನಿಧಿ ಉಷಾಲತಾ, ವಲಯದ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.