ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದ ಕಾಲಾವಧಿ ಜಾತ್ರೋತ್ಸವದ ಧ್ವಜಾರೋಹಣವು ಕುಂಟಾರು ಕ್ಷೇತ್ರದ ತಂತ್ರಿಯವರ ನೇತೃತ್ವದಲ್ಲಿ ಫೆ.13 ರಂದು ನಡೆಯಿತು.
ಬಳಿಕ ದೇವಳದ ಅಂಗಣಕ್ಕೆ ನಿರ್ಮಿಸಲಾದ ಶಾಶ್ವತ ಚಪ್ಪರದ ಉದ್ಘಾಟನೆಯನ್ನು ಕುಂಟಾರು ಕ್ಷೇತ್ರದ ಶ್ರೀಧರ ತಂತ್ರಿಯವರು ನೆರವೇರಿಸಿದರು.
















ಈ ಸಂದರ್ಭದಲ್ಲಿ ಡಾ.ಕೆ.ವಿ.ಚಿದಾನಂದ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಅನುವಂಶಿಕ ಮೊಕ್ತೇಸರರಾದ ಹೇಮಚಂದ್ರ ಬೈಪಡಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ, ಸೇವಾ ಸಮಿತಿ ಅಧ್ಯಕ್ಷ ಪುರುಷೋತ್ತಮ ಕೋಲ್ಚಾರು,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎನ್.ಎ.ರಾಮಚಂದ್ರ, ಕೃಪಾಶಂಕರ ತುದಿಯಡ್ಕ ಹಾಗೂ ಸಮಿತಿಯ ಸದಸ್ಯರು ಮತ್ತು ಗ್ರಾಮದ ಭಕ್ತಾದಿಗಳು ಉಪಸ್ಥಿತರಿದ್ದರು.










