ಸ್ವಾಭಿಮಾನಿ ಕನ್ನಡಿಗ ಪ್ರಶಸ್ತಿ ಸಮಾರಂಭ : ಡಾ. ಭವ್ಯ ಎಚ್.ಯು., ಹರೀಶ್ ಬಂಟ್ವಾಳ್ ಹಾಗೂ ಹಸೈನಾರ್ ಜಯನಗರರಿಗೆ ಸನ್ಮಾನ
ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಪಡೆ ಕೊಡಗು ಜಿಲ್ಲಾ ಘಟಕದ ವತಿಯಿಂದ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದ 50 ರ ಸಂಭ್ರಮ ಗಡಿನಾಡ ಕನ್ನಡಿಗರ ಸ್ನೇಹ ಸಂಗಮ ಫೆ. 16 ರಂದು ಪೆರಾಜೆಯ ಕನ್ನಡ ಪೆರಾಜೆ ಶಾಲೆಯಲ್ಲಿ ನಡೆಯಲಿದೆ.















ಈ ಕಾರ್ಯಕ್ರಮದಲ್ಲಿ ಸ್ವಾಭಿಮಾನಿ ಕನ್ನಡಿಗ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯಲಿದ್ದು
ವೈದ್ಯಕೀಯ ಕ್ಷೇತ್ರದಿಂದ ಸುಳ್ಯ ಕೆ ವಿ ಜಿ ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿ ಕಳೆದ 6 ವರ್ಷಗಳಿಂದ ಉತ್ತಮ ಸೇವೆಯನ್ನು ನೀಡುತ್ತಾ ಬಂದಿರುವ ಡಾ.ಭವ್ಯ ಎಚ್ ಯು,ಹಾಗೂ ಮಾಧ್ಯಮ ಕ್ಷೇತ್ರದ ಸಾಧನೆಗಾಗಿ ಸುದ್ದಿ ಪತ್ರಿಕೆಯ ಪ್ರಧಾನ ಸಂಪಾದಕ ಹರೀಶ್ ಬಂಟ್ವಾಳ್, ಹಾಗೂ ವರದಿಗಾರ ಹಸೈನಾರ್ ಜಯನಗರ ಇವರು ಸನ್ಮಾನ ಸ್ವೀಕರಿಸಲಿದ್ದಾರೆ.
ಅಲ್ಲದೆ ಸ್ನೇಹ ಸಂಗಮದಲ್ಲಿ ಉಚಿತ ಕಿವಿಯ ತಪಾಷಣೆ, ರಕ್ತದಾನ ಶಿಬಿರ, ಅರೋಗ್ಯ ಶಿಬಿರ, ಮೆಡಿಕಲ್ ಕಿಟ್ ಹಸ್ತಾಂತರ, ಸವಲತ್ತು ವಿತರಣೆ, ವೀಲ್ ಚೇರ್ ಕೊಡುಗೆ, ಕ್ರೀಡಾ ಕೂಟ, ಹಾಗೂ ಇನ್ನೂ ಹಲವಾರು ಮಂದಿ ಸಾಧಕರ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು
ಈ ಅದ್ದೂರಿ ಕಾರ್ಯಕ್ರಮಕ್ಕೆ ಸಿನಿಮಾ ತಾರೆಯರು,ಕ್ರೀಡಾ ಸಾಮಾಜಿಕ ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










