ಕೆವಿಜಿ ಅಮರಜ್ಯೋತಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ವಿದಾಯೋತ್ಸವ

0

ಹೆತ್ತವರ ಹಾಗೂ ಅಧ್ಯಾಪಕರ ಆಶಯಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದರೊಂದಿಗೆ ತಾವು ಕಲಿತ ಸಂಸ್ಥೆಗೆ ಕೀರ್ತಿ ತರಬೇಕು – ಡಾ. ಉಜ್ವಲ್ ಯು.ಜೆ.

ಅಧ್ಯಾಪಕರ ಪ್ರಾರ್ಥನೆಯೊಂದಿಗೆ ವಿದಾಯೋತ್ಸವ ಕಾರ್ಯಕ್ರಮ ಪ್ರಾರಂಭಗೊಂಡಿತು. ಕೆವಿಜಿ ಎಜೆ ಅಂತಿಮ ಪಿಯು ವಿದ್ಯಾರ್ಥಿಗಳಿಗೆ ಆತ್ಮೀಯವಾದ ಬೀಳ್ಕೊಡುಗೆ ಸಮಾರಂಭದಲ್ಲಿ ಡಾ. ಉಜ್ವಲ್ ಯು.ಜೆ , ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ವಿವರಿಸಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ ಮಾತನಾಡುತ್ತಾ, ಸುಳ್ಯದಂತಹ ಗ್ರಾಮೀಣ ಪ್ರದೇಶದಲ್ಲಿ ಮೌಲ್ಯಯುತವಾದ ಹಾಗೂ ಇಂದಿನ ಸ್ಪರ್ಧಾತ್ಮಕ ಜಗತ್ತಿನ ಅಗತ್ಯಕ್ಕೆ ಅನುಗುಣವಾದ ಪಿಯು ಶಿಕ್ಷಣ ನೀಡಿ ಮಕ್ಕಳಿಗೆ ಉತ್ತಮ ಭವಿಷ್ಯ ನೀಡಲು ಶ್ರಮಿಸುತ್ತಿರುವ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಹಾಗೂ ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಅಭಿನಂದಿಸುತ್ತಾ ವಿದ್ಯಾರ್ಥಿಗಳು ಸಂಸ್ಕಾರಯುತ ಜೀವನ ಪದ್ಧತಿಯನ್ನು ಅಳವಡಿಸಿಕೊಂಡು ಸಮಾಜದಲ್ಲಿ ಯೋಗ್ಯ ವ್ಯಕ್ತಿಗಳಾಗಿ ಬದುಕುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿ ಶುಭ ಹಾರೈಸಿದರು. ವಿದ್ಯಾರ್ಥಿಗಳಿಗಾಗಿ ಅಧ್ಯಾಪಕರು ಬೇರೆ ಬೇರೆ ತಂಡಗಳಾಗಿ ಮನೋರಂಜನ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಪರೀಕ್ಷಾ ಒತ್ತಡಗಳನ್ನು ಬದಿಗಿಟ್ಟು ವಿದ್ಯಾರ್ಥಿಗಳು ಸಂಭ್ರಮಿಸಿದರು. ವಿದ್ಯಾರ್ಥಿಗಳಾದ ಪ್ರತಿಜ್ಞ, ಖಲಿದ ನುಹಾ, ನಿತಿನ್ ಥಾಮಸ್, ಸಾನಿಕ ರೈ, ಸಂದೇಶ್, ರಿತಿ ಆಳ್ವ, ಶ್ರೇಯಸ್ , ಮೊಹಮ್ಮದ್ ಶಬಾಬ್ ಅಮರ ಜ್ಯೋತಿ ಕಾಲೇಜಿನಲ್ಲಿ ತಾವು ಕಳೆದ ಎರಡು ವರ್ಷಗಳ ನೆನಪುಗಳನ್ನು ಹಂಚಿಕೊಂಡರು. ಚಂದನ ತಮ್ಮ ಅನುಭವವನ್ನು ಸ್ವರಚಿತ ಕವನದ ಮೂಲಕ ವಾಚಸಿದರು. ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿ ಹಾಗೂ ಅಧ್ಯಾಪಕರ ಸಹಕಾರವನ್ನು ಸ್ಮರಿಸಿಕೊಂಡರು. ಮಧ್ಯಾಹ್ನದ ಭೋಜನದೊಂದಿಗೆ ಕಾರ್ಯಕ್ರಮ ಸಮಾಪನಗೊಂಡಿತು.