ಸುಳ್ಯ ವೆಂಕಟರಮಣ ಸೊಸೈಟಿ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಂದ ಸುಳ್ಯ ಎಂ.ಜಿ.ಎಂ. ಶಾಲೆಗೆ‌ ಭೇಟಿ : ಪುಸ್ತಕ ಕೊಡುಗೆ

0

ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಅಧ್ಯಕ್ಷ ಕೆ.ಸಿ.ಸದಾನಂದ ಹಾಗೂ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿಯವರು ತಮ್ಮ ಸಹ ಸಂಸ್ಥೆ ಎಂ.ಜಿ.ಎಂ. ಶಿಕ್ಷಣ ಸಂಸ್ಥೆ ಗೆ ಭೇಟಿ ನೀಡಿದರು.

ಪುಸ್ತಕಗಳ ಕೊಡುಗೆ ದಿನವಾದ ಇಂದು ರೂ. ಐದು ಸಾವಿರ ಮೌಲ್ಯದ ಪುಸ್ತಕಗಳನ್ನು ಶಾಲಾ ಸಂಚಾಲಕರಾದ ದೊಡ್ಡಣ್ಣ ಬರೆಮೇಲು ಹಾಗೂ‌ ಮುಖ್ಯ ಶಿಕ್ಷಕರಾದ ವಿಜಯಲಕ್ಷ್ಮಿಯವರಿಗೆ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ವೆಂಕಟರಮಣ ಸೊಸೈಟಿ ಯ ಮುಖ್ಯ‌ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ ಹಾಗೂ ಶಾಲಾ ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.