ಶೇಣಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ ಪಾಡಾಜೆಯವರು ಧ್ವಜಾರೋಹಣ ಮಾಡಿದರು. ಶಾಲಾ ವಿದ್ಯಾರ್ಥಿ ರೋಶಿತ್ ಜೆ. ಕೆ ಕಾರ್ಯಕ್ರಮದ ಮಹತ್ವದ ಬಗ್ಗೆ ಮಾತನಾಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಶಾಸಕಿ ಕು. ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ವಿಠ್ಠಲ ದಾಸ್, ಅ.ಮು. ಗ್ರಾ. ಪಂ. ಸದಸ್ಯ ಅಶೋಕ್ ಚೂಂತಾರು ಭಾಗವಹಿಸಿದ್ದರು. ಮುಖ್ಯ ಭಾಷಣಕಾರರಾಗಿ ಬರಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೂಂತರು ಮಾತನಾಡಿದರು.















ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ರೈ ಶೇಣಿ, ಗ್ರಾ.ಪಂ. ಸದಸ್ಯರಾದ ಶ್ರೀಮತಿ ಸೀತಾ ಎಚ್, ಶ್ರೀಮತಿ ಮೀನಾಕ್ಷಿ ಚೂಂತಾರು, ಎಸ್.ಡಿ.ಎಂ.ಸಿ. ಅಧ್ಯಕ್ಷ ಪ್ರಶಾಂತ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಲಿಂಗಪ್ಪಗೌಡ ಚೂಂತಾರು, ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರತಿನ್ ಚೂಂತಾರು, ಸಾರ್ವಜನಿಕ ಶ್ರೀ ಕೃಷ್ಣ ಸೇವಾದ ಸಮಿತಿಯ ಅಧ್ಯಕ್ಷರಾದ ಸೃಜನ್ ಶೇಣಿ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶ್ರೇಯಸ್ವಿರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕವಾಗಿ ಸಾಧನೆಗೈದ ಶಾಲೆಯ ಹಿರಿಯ ವಿದ್ಯಾರ್ಥಿಗಳನ್ನು ಶಾಲೆಗೆ ಪ್ರೊಜೆಕ್ಟರ್ ಕೊಡುಗೆಯಾಗಿ ನೀಡಿದ ಉದ್ಯಮಿ ವಿಠ್ಠಲ ದಾಸ್, ಒಂಬತ್ತು ವರ್ಷಗಳ ಕಾಲ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮಾಧವ ಟಿ.ಪಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲಿಂಗಪ್ಪಗೌಡ ಚೂಂತಾರು ರವರನ್ನು ಹಾಗೂ ಸಾರ್ವಜನಿಕ ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷ ಸೃಜನ್ ಶೇಣಿಯವರನ್ನು ಸನ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ವಿನಯಪ್ರಸಾದ್ ಟಿ. ಸ್ವಾಗತಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅತಿಥಿ ಶಿಕ್ಷಕಿಯಾದ ಶ್ರೀಮತಿ ಭವ್ಯ ಸಿ. ವಂದಿಸಿದರು. ಸಹ ಶಿಕ್ಷಕ ಪ್ರಭಾಕರ ಕಾರ್ಯಕ್ರಮ ನಿರೂಪಿಸಿದರು.
ಸಭಾ ಕಾರ್ಯಕ್ರಮದ ಬಳಿಕ ಶ್ರೀ ಕೃಷ್ಣ ಭಜನಾ ಮಂಡಳಿ ಹಾಗೂ ಮಾತೃಶಕ್ತಿ ದುರ್ಗಾವಾಹಿನಿ, ಪದವು ಇವರಿಂದ ಕುಣಿತ ಭಜನೆ ನಡೆಯಿತು.
ನಂತರ ಯಕ್ಷಗಾನ ಗಾನವೈಭವ, ಅಂಗನವಾಡಿ ಪುಟಾಣಿಗಳಿಂದ, ಶಾಲಾ ವಿದ್ಯಾರ್ಥಿಗಳಿಂದ , ಪೋಷಕರಿಂದ, ಹಳೆಯ ವಿದ್ಯಾರ್ಥಿಗಳಿಂದ, ಸಾರ್ವಜನಿಕರಿಂದ ಸಾಂಸ್ಕೃತಿಕ ಕಾರ್ಯಕ್ರಮ, ಕುಸಲ್ದ ಕುರ್ಲರಿ ತುಳು ಹಾಸ್ಯ ಪ್ರದರ್ಶನ, ಸ್ಥಳೀಯ ಕಲಾವಿದರಿಂದ ಜೋಯಿಸರ್ ನ ಭವಿಷ್ಯ ಎನ್ನುವ ಹಾಸ್ಯ ಪ್ರಹಸನ ನಡೆಯಿತು.










