ಸಂಪಾಜೆ ವಲಯ ಕಾಂಗ್ರೆಸ್ ಸಮಾವೇಶ

0

ಸಂಪಾಜೆ ವಲಯ ಕಾಂಗ್ರೆಸ್ ಸಮಾವೇಶ ಅಧ್ಯಕ್ಷರಾಗಿ ಸೋಮಶೇಖರ್ ಕೊಯಿಂಗಾಜೆ ಮುಂದುವರಿಕೆ

ವಲಯ ಕಾಂಗ್ರೆಸ್ ಗೆ ನೂತನ ಪದಾಧಿಕಾರಿಗಳ ಆಯ್ಕೆ, ಬೂತ್ ಸಮಿತಿ ಅಧ್ಯಕ್ಷರುಗಳ ನೇಮಕ

ವಿವಿಧ ಘಟಕಗಳಿಗೆ ನೂತನ ಅಧ್ಯಕ್ಷರುಗಳ ಹಾಗೂ ಪದಾಧಿಕಾರಿಗಳ ಆಯ್ಕೆ

ದ.ಕ.ಸಂಪಾಜೆ ವಲಯ ಕಾಂಗ್ರೆಸ್ ಇದರ ಕಾರ್ಯಕರ್ತರ ಸಮಾವೇಶವು ಫೆ. 16 ರಂದು ಕಲ್ಲುಗುಂಡಿಯ ಸಮನ್ವಯ ಸಹಕಾರಿ ಸಭಾಭವನದಲ್ಲಿ ಜರುಗಿತು.

ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾದ ಲಕ್ಷ್ಮೀಷ ಗಬ್ಬಲಡ್ಕರವರು ಕಾರ್ಯಕ್ರಮವನ್ನು ಉದ್ಘಾಟಿಸಿ, “ನಾನ್ಯಾಕೆ ಕೋಮುವಾದವನ್ನು ತೊರೆದೆ” ಎಂಬ ವಿಚಾರದಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಸಂಪಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ ಅವರು ಅಧ್ಯಕ್ಷತೆಯನ್ನು ವಹಿಸಿ “ಪಕ್ಷ ಸಂಘಟನೆಗೆ ನನ್ನ ಸಹಕಾರ ಸದಾ ಇದೆ, ಹೊಸಮುಖಗಳು ಪಕ್ಷದ ವಿವಿಧ ಜವಬ್ದಾರಿಗಳನ್ನು ವಹಿಸಿಕೊಂಡು ಸಂಪಾಜೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕು, ಇಂದಿನ ಈ ಕಾರ್ಯಕ್ರಮದಲ್ಲಿ ಹಲವು ಹೊಸಮುಖಗಳಿದ್ದು, ಇದು ಪಕ್ಷ ಸಂಘಟನೆಗೆ ಹೊಸ ಹುರುಪನ್ನು ನೀಡಲಿದೆ” ಎಂದವರು ಹೇಳಿದರು.

ಕೆ.ಪಿ.ಸಿ.ಸಿ.ಪ್ರಚಾರ ಸಮಿತಿಯ ಸಂಯೋಜಕರಾದ ಕೆ.ಪಿ.ಜಾನಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞಿ ಗೂನಡ್ಕರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಚೇತನ್ ಕಜೆಗದ್ದೆ ಅವರನ್ನು ಈ ಸಂದರ್ಭ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.

ಸಂಪಾಜೆ ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಲಲನ ಕೆ.ಆರ್, ವಲಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಎ.ಕೆ.ಹನೀಫ್, ವಲಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಿತಿನ್ ಜಿ.ಆರ್, ವಲಯ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿ ಬಾಲಚಂದ್ರ ಎನ್.ಅವರನ್ನು ಸರ್ವಾನುಮತದಿಂದ ಆಯ್ಕೆಗೊಳಿಸಲಾಯಿತು. ಇದೇ ವೇಳೆ ಈ ಘಟಕಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಸಂಪಾಜೆ ವಲಯ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕೆ.ಎಂ.ಅಶ್ರಫ್, ವಸಂತ ಗೌಡ ಪೆಲ್ತಡ್ಕ, ಕೋಶಾಧಿಕಾರಿಯಾಗಿ ರಹೀಂ ಬೀಜದಕಟ್ಟೆ ಅವರನ್ನು ಆಯ್ಕೆ ಮಾಡಲಾಯಿತು. ಸಂಪಾಜೆ ಗ್ರಾಮದ ಒಟ್ಟು 6 ಬೂತ್ ಸಮಿತಿಗೆ ಅಧ್ಯಕ್ಷರುಗಳನ್ನು ನೇಮಿಸಲಾಯಿತು.ವಲಯ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಹಾಗೂ ಕೋರ್ ಕಮಿಟಿಯನ್ನು ರಚಿಸಲಾಯಿತು.

ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಬಿ.ಎಸ್.ಯಮುನಾ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೆ.ಆರ್.ಜಗದೀಶ್ ರೈ, ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ, ಸಂಪಾಜೆ ವಲಯ ಕಾಂಗ್ರೆಸ್ ನ ನೂತನ ಉಪಾಧ್ಯಕ್ಷರಾದ ಕೆ.ಎಂ.ಅಶ್ರಫ್, ಪ್ರಧಾನ ಕಾರ್ಯದರ್ಶಿ ಟಿ.ಐ.ಲೂಕಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಪಾಜೆ ವಲಯ ಕಾಂಗ್ರೆಸ್ ವರ್ಕಿಂಗ್ ಕಮಿಟಿಯ ಪ್ರಧಾನ ಕಾರ್ಯದರ್ಶಿ ಪಿ.ಕೆ.ಅಬೂಸಾಲಿ ಗೂನಡ್ಕರವರು ಸ್ವಾಗತಿಸಿ, ಕೆ.ಪಿ.ಸಿ.ಸಿ.ವಕ್ತಾರರಾದ ಶೌವಾದ್ ಗೂನಡ್ಕರವರು ವಂದಿಸಿದರು. ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಬಿ.ಎಸ್.ಕಾಂತಿ ಅವರು ಕಾರ್ಯಕ್ರಮ ನಿರೂಪಿಸಿದರು.