ದ.ಕ.ಜಿಲ್ಲಾ ,27ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ

0

ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿ ಬೆಳೆಸಬೇಕು; ಸ್ಪೀಕರ್ ಯು.ಟಿ. ಖಾದರ್

ದ.ಕ.ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಗಳೂರು ವಿ.ವಿ.ಯ ಮಂಗಳ ಸಭಾಂಗಣದಲ್ಲಿ ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲರ ಅಧ್ಯಕ್ಷತೆಯಲ್ಲಿ ನಡೆಯುತ್ತಿದ್ದು, ಸಾಹಿತಿ ಬಿ.ಆರ್.ಲಕ್ಷ್ಮಣ ರಾವ್ ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ ಮಕ್ಕಳಲ್ಲಿ ಪುಸ್ತಕ ಓದುವ ಅಭಿರುಚಿಯನ್ನು ಪೋಷಕರು ಬೆಳೆಸಬೇಕು.ರಾಜಕಾರಣಿಗಳು ಕೂಡ ಪುಸ್ತಕಗಳನ್ನು ಓದಿ ಸಮಾಜಕ್ಕೆ ಕೊಡುಗೆ ನೀಡಬೇಕು
.ನಮ್ಮ ಭಾಷೆಯನ್ನು ಬೆಳೆಸುವುದರೊಂದಿಗೆ ಅನ್ಯ ಭಾಷೆಯನ್ನು ಪ್ರೀತಿಸಬೇಕು ಎಂದು ಹೇಳಿದರು.


ವೇದಿಕೆಯಲ್ಲಿ ಉಪ ಕುಲಪತಿ ಪ್ರೊ
ಪಿ.ಎಲ್.ಧರ್ಮ, ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಶ್ರೀನಾಥ್ ಎಂ.ಪಿ., ಸಾಹಿತಿ ಭುವನೇಶ್ವರಿ ಹೆಗ್ಗಡೆ, ಗೇರು ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಹರಿಕೃಷ್ಣ ಪುನರೂರು, ಪ್ರದೀಪ್ ಕುಮಾರ್ ಕಲ್ಕೂರ ಮೊದಲಾದವರು ಉಪಸ್ಥಿತರಿದ್ದರು.


ಮಂಗಳೂರು ತಾಲೂಕು ಕಸಾಪ ಅಧ್ಯಕ್ಷ ಧನಂಜಯ ಕುಂಬ್ಳೆ ಸ್ವಾಗತಿಸಿದರು.