ಆಲೆಟ್ಟಿ ಪ್ರೌಢಶಾಲೆ ಮತ್ತು ಸರಕಾರಿ ಜೂನಿಯರ್ ಕಾಲೇಜಿಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಸುಳ್ಯ ಭೇಟಿ

0

ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರು ಇಂದು ಸುಳ್ಯದ ಆಲೆಟ್ಟಿ ಸರಕಾರಿ ಪ್ರೌಢಶಾಲೆ ಮತ್ತು ಸುಳ್ಯ ಸರಕಾರಿ ಜೂನಿಯರ್ ಕಾಲೇಜಿಗೆ ಭೇಟಿ ನೀಡಿ ಪ್ರಾಧಿಕಾರದ ನೆರವಿನಿಂದ ಆದ ಕಾಮಗಾರಿಗಳನ್ನು ವೀಕ್ಷಿಸಿದರು.

ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ 10 ಲಕ್ಷ ರೂ. ನೆರವಿನಿಂದ ಪ್ರೌಢಶಾಲೆಯ ಕೊಠಡಿ ಕಾಮಗಾರಿ ಹಾಗೂ 5 ಲಕ್ಷ ರೂ. ವೆಚ್ಚದಲ್ಲಿ ಸುಳ್ಯ ಜೂನಿಯರ್ ಕಾಲೇಜಿನ ಸ್ಮಾರ್ಟ್ ಕ್ಲಾಸ್ ನಿರ್ಮಾಣವಾಗಿದ್ದು, ಪ್ರೌಢಶಾಲೆಯ ಅಧ್ಯಾಪಕ ವೃಂದದವರು ಮತ್ತು ಜೂನಿಯರ್ ಕಾಲೇಜಿನ ಉಪ ಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯರು ಸೋಮಣ್ಣರವರಿಗೆ ವಿವರ ನೀಡಿದರು.


ಪ್ರಾಧಿಕಾರದ ಸದಸ್ಯ, ಕಾಸರಗೋಡು ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್. ಸುಬ್ಬಯ್ಯ ಕಟ್ಟೆ, ಗಡಿನಾಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಚನಿಯಪ್ಪ ನಾಯ್ಕ್, ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬ್ಲಾಕ್ ಕಾಂಗ್ರೆಸ್ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮತ್ತಿತರರು ಮಂಡಳಿಯ ಅಧ್ಯಕ್ಷರ ಜೊತೆಗಿದ್ದರು.