ಫೆ.26 : ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ಫೆ.26 ರಂದು ನಡೆಯಲಿದೆ.


ಬೆಳಿಗ್ಗೆ ಗಂಟೆ 9.30 ರಿಂದ ಪ್ರತಿಷ್ಠಾ ವಾರ್ಷಿಕೋತ್ಸವದ ಲೆಕ್ಕಪತ್ರ ಮಂಡನೆ.ಮಧ್ಯಾಹ್ನ ಗಂಟೆ 12.30 ಕ್ಕೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಲಿದೆ.
ಸಂಜೆ ಗಂಟೆ 6.00 ರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ.


ರಾತ್ರಿ ಗಂಟೆ 7.30 ರಿಂದ ಸೇವಾರ್ಥಿಗಳಿಂದ ರಂಗಪೂಜೆ ನಡೆಯಲಿದೆ.
ಗಂಟೆ 8.30 ಕ್ಕೆ ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ ತಿಳಿಸಿದ್ದಾರೆ.