ಮಾ.1; ಕೊಡಗು ದ.ಕ.ಗೌಡ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ

0

ಕೊಡಗು ದಕ್ಷಿಣ ಕನ್ನಡ ಗೌಡ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಸುಳ್ಯ ಶಾಖೆಯ ಪ್ರಥಮ ವಾರ್ಷಿಕೋತ್ಸವ ಸಮಾರಂಭ ಮಾ.1ರಂದು ಪೂ.10ಕ್ಕೆ ಸುಳ್ಯ ಲಯನ್ಸ್ ಕ್ಲಬ್ ನಲ್ಲಿ ನಡೆಯಲಿದೆ.


ಸಮಾರಂಭದ ಅಧ್ಯಕ್ಷತೆಯನ್ನು ಸೊಸೈಟಿಯ ಅಧ್ಯಕ್ಷ ಪಾಣತ್ತಲೆ ಪಳಂಗಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಸಕಿ ಕು.ಭಾಗೀರಥಿ ಮುರುಳ್ಯ, ಅತಿಥಿಗಳಾಗಿ ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ವೆಂಕಟರಮಣ ಸೊಸೈಟಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ್, ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್.ಗಂಗಾಧರ್, ಶ್ರೀ ಹರಿ ಕಾಂಪ್ಲೆಕ್ಸ್ ಮಾಲಕ ಕೃಷ್ಣ ಕಾಮತ್ ಭಾಗವಹಿಸಲಿದ್ದಾರೆ. ಸಾರ್ವಜನಿಕರು ಭಾಗವಹಿಸಬೇಕೆಂದು ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ.