ಕೆ.ವಿ.ಜಿ ಮೆಡಿಕಲ್ ಕಾಲೇಜಿನಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಫೆಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್

0

ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಇನ್ ಮೆಡಿಕಲ್ ಎಜ್ಯುಕೇಶನ್ ಫೆಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಮ್ ಫೆ. 24-25 ರಂದು ಕಾಲೇಜಿನ ಆಡಿಟೋರಿಯಂನಲ್ಲಿ ನಡೆಯಿತು.


ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ತಿರುಚಿ ಕೆ.ಎ.ಪಿ.ವಿ.ಜಿ.ಎಂ.ಸಿ ಮೆಡಿಕಲ್ ಕಾಲೇಜಿನ ಕಮ್ಯೂನಿಟಿ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಆರ್. ಪಾರ್ಥಸಾರಥಿ, ದಿಂಡಿಗಲ್ ಸರಕಾರಿ ಮೆಡಿಕಲ್ ಕಾಲೇಜಿನ ಕಮ್ಯೂನಿಟಿ ಮೆಡಿಸಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ರಾಮ್ ಪ್ರಭಾಕರ್ ವಿ ಮತ್ತು ತಿರುವೂರು ಸರಕಾರಿ ಮೆಡಿಕಲ್ ಕಾಲೇಜಿನ ಫಿಸಿಯಾಲಜಿ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ಜೆ.ಬಿ ಅಶ್ರಫ್ ಅಲಿ ಸಂಪನ್ಮೂಲ ವ್ಯಕ್ತಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಮೆಡಿಕಲ್ ಎಜ್ಯುಕೇಶನ್ ಯುನಿಟ್ ಕೋ ಕಾರ್ಡಿನೇಟರ್ ಡಾ. ನವ್ಯಾ ಬಿ.ಎನ್ ಸ್ವಾಗತಿಸಿ, ಕಾರ್ಡಿನೇಟರ್ ಡಾ. ಭರತ್ ಶೆಟ್ಟಿ ವಂದಿಸಿದರು.

ಡಾ. ಸುಪ್ರಿತಾ ಟಿ ಮತ್ತು ಡಾ. ಶೃತಿ ಕೆ. ಕಾರ್ಯಕ್ರಮ ನಿರೂಪಿಸಿದರು. ಕಾರ್ಯಾಗಾರ ಫೆ. 25ರ ಮಧ್ಯಾಹ್ನದ ತನಕ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ನಡೆಯಲಿದೆ.