







ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ಶ್ರೀ ಶಾಸ್ತಾವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಪ್ರಯುಕ್ತ ಸಾಮೂಹಿಕ ಸತ್ಯನಾರಾಯಣ ದೇವರ ಪೂಜೆ ಹಾಗೂ ಭಜನಾ ಸಂಕೀರ್ತನೆಯು ಫೆ.೨೫ರಂದು ನಡೆಯಲಿದೆ. ಭಜನಾ ಸಂಕೀರ್ತನೆಯು ಬೆಳಗ್ಗೆ ಸೂರ್ಯೋದಯಕ್ಕೆ ಪ್ರಾರಂಭಗೊಂಡು ರಾತ್ರಿ ಮಹಾಪೂಜೆಯವರೆಗೆ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ತಿಳಿಸಿದ್ದಾರೆ.










