ಕನಕಮಜಲು ಗ್ರಾಮ ಪಂಚಾಯತ್ ಹಾಗೂ ಊರಿನ ಎಲ್ಲಾ ಸಂಘ ಸಂಸ್ಥೆಗಳ ಪಾಲ್ಗೊಳ್ಳುವಿಕೆಯೊಂದಿಗೆ ಕನಕಮಜಲು ಗ್ರಾ.ಪಂ. ಉಪಾಧ್ಯಕ್ಷರಾಗಿದ್ದು, ಇತ್ತೀಚೆಗೆ ಅಗಲಿದ ದಿ. ರವಿಚಂದ್ರ ಕಾಪಿಲ ಅವರಿಗೆ ನುಡಿ ನಮನ ಹಾಗೂ ಶ್ರದ್ಧಾಂಜಲಿ ಸಭೆಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಫೆ.24ರಂದು ಬೆಳಿಗ್ಗೆ ನಡೆಯಿತು.
ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದ ಪ್ರಧಾನ ಕಾರ್ಯದರ್ಶಿ ಈಶ್ವರ ಕೊಂರ್ಬಡ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.








ದಿ. ರವಿಚಂದ್ರ ಕಾಪಿಲ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಗ್ರಾ.ಪಂ. ಮಾಜಿ ಅಧ್ಯಕ್ಷ ಹಿರಿಯರಾದ ವಸಂತ ಗಬ್ಬಲಡ್ಕ, ಗ್ರಾ.ಪಂ. ಸದಸ್ಯ ಶ್ರೀಧರ ಕುತ್ಯಾಳ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಶ್ರೀ ಆತ್ಮಾರಾಮ ಭಜನಾ ಮಂದಿರದ ಅಧ್ಯಕ್ಷ ವಸಂತ ಮಳಿ, ಕನಕಮಜಲು ಪ್ರಾ.ಕೃ.ಪ.ಸ.ಸಂಘ ನಿ. ಜಾಲ್ಸೂರು ಇದರ ಮಾಜಿ ಅಧ್ಯಕ್ಷರುಗಳಾದ ಹರೀಶ್ ಮೂರ್ಜೆ, ನೇತ್ರಕುಮಾರ ಪೇರೋಳಿ, ಗ್ರಾ.ಪಂ. ಮಾಜಿ ಸದಸ್ಯ ಮಹಮ್ಮದ್ ಪವಾಜ್, ಗ್ರಾ.ಪಂ. ಸದಸ್ಯರಾದ ಇಬ್ರಾಹಿಂ ಕಾಸಿಂ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಶ್ರೀ ನ.ರಾ.ಗೌ.ಸ.ಮಾ.ಹಿ.ಪ್ರಾ.ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹಮೀದ್ ಕನಕಮಜಲು ಸೇರಿದಂತೆ ಮತ್ತಿತರರು ದಿ. ರವಿಚಂದ್ರ ಕಾಪಿಲ ಅವರ ಬಗ್ಗೆ ಮಾತನಾಡಿ, ನುಡಿನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ. ಸದಸ್ಯರುಗಳು, ಕನಕಮಜಲು ಯುವಕ ಮಂಡಲದ ಪದಾಧಿಕಾರಿಗಳು, ಗ್ರಾಮದ ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು ಗ್ರಾ. ಪಂ. ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.










