ಸರಕಾರ ಆರೋಗ್ಯ ಮತ್ತು ಶಿಕ್ಷಣಕ್ಕೆ ಆದ್ಯತೆ ನೀಡಬೇಕು; ಡಿ.ವಿ.
ಶಿಕ್ಷಣದಿಂದ ವಿನಮ್ರತೆ ಮತ್ತು ಸುಸಂಸ್ಕೃತ ಸಮಾಜ: ಸ್ವಾಮೀಜಿ
ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಕ್ಷೇತ್ರ ಸವಾಲಿನ ಕ್ಷೇತ್ರವಾಗಿ ಪರಿವರ್ತನೆಯಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸರಕಾರ ಆದ್ಯತೆ ನೀಡಿದಾಗ ಮಾತ್ರ ಅದು ಪರಿಪೂರ್ಣ ಸರಕಾರವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು.

ಅವರು ಫೆ. 24 ರಂದು ಸುಳ್ಯದ ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಮಂಗಳೂರು ಎಂ.ಆರ್.ಪಿ.ಎಲ್.ವತಿಯಿಂದ ಕೊಡುಗೆಯಾಗಿ ನೀಡಿದ ವಿಸ್ತೃತ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಬಳಿಕ ಅಮೃತ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.















ಮಾನವ ಸಂಪನ್ಮೂಲದ ಕೊಡುಗೆಯಿಂದ ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ವಿಶ್ವವಿದ್ಯಾಲಯಗಳು ದಾಖಲಾತಿ ಪಡೆಯುವ ಕೌಂಟರ್ ಗಳಾಗದೆ ಸಂಶೋಧನೆ ಮಾಡುವ ಕೇಂದ್ರಗಳಾಬೇಕು ಎಂದ ಅವರು ವೈಯುಕ್ತಿಕ ಜೀವನದೊಂದಿಗೆ ಸಮಾಜಕ್ಕೆ ಕೊಡುಗೆ ನೀಡಿದಾಗ ಸಾಮಾಜಿಕ ಪರಿವರ್ತನೆ ಸಾಧ್ಯವಾಗುತ್ತದೆ.ಖಾಸಗಿ ಸಂಸ್ಥೆಗಳು ದೇಶಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಅವರು ಹೇಳಿದರು.
ಆಶೀರ್ವಚನ ನೀಡಿದ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಮಾತನಾಡಿ ಶಿಕ್ಷಣ ವ್ಯವಸ್ಥೆ ಎಲ್ಲಿ ಸಧೃಡವಾಗಿ ಇರುತ್ತದೆಯೋ ಆ ದೇಶ ಗುರುತಿಸಿಕೊಳ್ಳುತ್ತದೆ.ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಡಬೇಕು. ಹೆಣ್ಣು ಮಕ್ಕಳು ಶಿಕ್ಷಣ ಪಡೆದು ದೇಶದ ಕಣ್ಮಣಿಗಳಾಗಬೇಕು.ಶಿಕ್ಷಣದಿಂದ ವಿನಮ್ರತೆ, ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು.
ಎಂ.ಆರ್.ಪಿ.ಎಲ್.ನ ಜನರಲ್ ಮನೇಜರ್(ಅಡ್ಮಿನಿಸ್ಟ್ರೇಶನ್) ಸತೀಶ್ ಆಲೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಸುಳ್ಯದ ಎ.ಒ.ಎಲ್.ಇ.ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಮಾತನಾಡಿ ಪ್ರತಿಯೊಬ್ಬರೂ ವಿದ್ಯಾವಂತರಾದಾಗ ಸಮಾಜ ಅಭಿವೃದ್ಧಿಯಾಗುತ್ತದೆ.ಧನಂಜಯ ಅಡ್ಪಂಗಾಯರು ಶಕ್ತಿಮೀರಿ ಸಂಸ್ಥೆಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ.ಎಂದರು.

ಸುಳ್ಯ ನಗರ ಪಂಚಾಯತ್ ಸದಸ್ಯ ಡೇವಿಡ್ ಧೀರಾ ಕ್ರಾಸ್ತಾ ಶುಭ ಹಾರೈಸಿದರು.
ಸಭೆಯ ಅಧ್ಯಕ್ಷತೆಯನ್ನು ದ.ಕ.ಗೌಡ ವಿದ್ಯಾಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ ವಹಿಸಿದ್ದರು.
ದ.ಕ.ಗೌಡ ವಿದ್ಯಾ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ರೇವತಿ ನಂದನ್, ಕೋಶಾಧಿಕಾರಿ ಮಾಧವ ಗೌಡ ಬೆಳ್ಳಾರೆ, ಶ್ರೀ ಶಾರದಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ., ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ.ಕ.ಗೌಡ ವಿದ್ಯಾ ಸಂಘದ ಅಧ್ಯಕ್ಷರಾದ ಧನಂಜಯ ಅಡ್ಡಂಗಾಯ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಶಾರದಾ ಹೆಣ್ಣು ಮಕ್ಕಳ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಭಾರತಿ ಪಿ ವಂದಿಸಿದರು. ಉಪನ್ಯಾಸಕರಾದ ಸ್ವರ್ಣ ಕಲಾ ಹಾಗೂ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ಕಟ್ಟಡ ನಿರ್ಮಾಣಕ್ಕೆ ಧನ ಸಹಾಯ ಮಾಡಿದವರನ್ನು ಸನ್ಮಾನಿಸಲಾಯಿತು.










