⬆️,ಶ್ರೀ ಚಾರ್ವಕದ ಭಕ್ತರಿಂದ ಸೀಮೆ ದೇವಸ್ಥಾನಕ್ಕೆ ಪಾದಯಾತ್ರೆ
⬆️ ಪಾದಯಾತ್ರೆಗೆ ಪಂಜದಲ್ಲಿ ಸ್ವಾಗತ

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.26 ರಂದು ಮಹಾಶಿವರಾತ್ರಿ ಆಚರಣೆ ವಿವಿಧ ವೈಧಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.
ವಿಶೇಷವಾಗಿ ಶ್ರೀ ಕಪಿಲೇಶ್ವರ ದೇವಸ್ಥಾನ ಚಾರ್ವಾಕ ಭಕ್ತರಿಂದ ಪಂಜ ಸೀಮೆ ದೇವಸ್ಥಾನಕ್ಕೆ ಚಾರ್ವಾಕ,ಕಾಣಿಯೂರು, ಪುಣ್ಚತ್ತಾರು,ನಿಂತಿಕಲ್, ಪಡ್ಪಿನಂಗಡಿ, ನಿಡ್ವಾಳ,ಪಂಜ ಮಾರ್ಗದಲ್ಲಿ ಪಾದಯಾತ್ರೆ ನಡೆಯಿತು. ಅವರಿಗೆ ಪಂಜ ಪೇಟೆ ದ್ವಾರದ ಬಳಿ ಸ್ವಾಗತ ನಡೆದು, ಬಳಿಕ ಅವರೊಂದಿಗೆ ಶ್ರೀ ದೇಗುಲಕ್ಕೆ ಪಾದಯಾತ್ರೆ ನಡೆಯಿತು.ಶ್ರೀ ಕಪಿಲೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ಧರ್ಮಪಾಲ ಕರಂದ್ಲಾಜೆ, ಮಾಜಿ ಅಧ್ಯಕ್ಷ ಮೋಹನ್ ಇಡ್ಯಡ್ಕ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾಧಿಗಳು ಪಾಲ್ಗೊಂಡಿದ್ದರು.









ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಲಕ್ಷ್ಮೀಶ ಗಬ್ಲಡ್ಕ,ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಮಾಯಿಲಪ್ಪ ಗೌಡ ಎಣ್ಮೂರು ಪಟ್ಟೆ, ಶ್ರೀ ಮಾಲಿನಿ ಕುದ್ವ, ಶ್ರೀಮತಿ ಪವಿತ್ರ ಮಲ್ಲೆಟ್ಟಿ,ಧರ್ಮಣ್ಣ ನಾಯ್ಕ ಗರಡಿ,ಗೌರವ ಸಲಹೆಗಾರರಾದ ಮಹೇಶ್ ಕುಮಾರ್ ಕರಿಕ್ಕಳ, ಪರಮೇಶ್ವರ ಬಿಳಿಮಲೆ, ಪೈಂದೋಡಿ ಶ್ರೀ ,ಸುಬ್ರಾಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಗೌಡ ಕುದ್ವ, ಶ್ರೀ ಶಾರದಾಂಬಾ ಭಜನಾ ಮಂಡಳಿ ಅಧ್ಯಕ್ಷ ನಾಗಪ್ಪ ಗೌಡ ಪಂಜದಬೈಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮೀ ಜಳಕದಹೊಳೆ, ಭಕ್ತಾದಿಗಳು ಉಪಸ್ಥಿತರಿದ್ದರು. ಬಳಿಕ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ದೇಗುಲದಲ್ಲಿ ಮಧ್ಯಾಹ್ನ ಶಿವಪೂಜೆ, ಮಹಾಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ ರಾತ್ರಿ ಶಿವಪೂಜೆ, ಮಹಾಪೂಜೆ, ರುದ್ರಾಭಿಷೇಕ, ಬಿಲ್ವಾರ್ಚನೆ , ರಾತ್ರಿ 8 ರಿಂದ ಶ್ರೀ ದೇವರಿಗೆ ಏಕಾದಶರುದ್ರಾಭಿಷೇಕ,ಬಿಲ್ವಾರ್ಚನೆ, ರುದ್ರ ಪಾರಾಯಣ. ರಾತ್ರಿ ಗಂಟೆ 10ಕ್ಕೆ ಮಹಾಪೂಜೆ ನಡೆಯಲಿದೆ










