







ಸುಳ್ಯ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಆಡಳಿತ ಮಂಡಳಿಗೆ ಇಂದು ಸುಳ್ಯದ ಗಿರಿದರ್ಶಿನಿಯಲ್ಲಿ ಮತದಾನ ನಡೆಯುತ್ತಿದೆ. 9 ಕ್ಷೇತ್ರಗಳಲ್ಲಿ 5 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ನಡೆದಿದೆ. ಉಳಿದಂತೆ 4 ಕ್ಷೇತ್ರಗಳಲ್ಲಿ ಬಿಜೆಪಿ – ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯುತ್ತಿದೆ.
ಪಕ್ಷದ ನಾಯಕರು, ಕಾರ್ಯಕರ್ತರು ಮತಯಾಚನೆ ನಡೆಸುತ್ತಿದ್ದಾರೆ.










