ಕಾಂತಮಂಗಲ ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ಫೆಸ್ಟ್

0

ಅಜ್ಜಾವರ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಾಂತಮಂಗಲದಲ್ಲಿ ಇಂಗ್ಲಿಷ್‌ ಕಲಿಕಾ ಚಟುವಟಿಕೆಗಳಿಗೆ ಸಂಬಂಧಿಸಿದ ಕಾರ್ಯಕ್ರಮ ಸ್ಪೋಕನ್ ಇಂಗ್ಲೀಷ್ ಫೆಸ್ಟ್ ಮಾರ್ಚ್ 1ರಂದು ಶಾಲೆಯ ಸಭಾಂಗಣದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾಗಿರುವ ಶ್ರೀಮತಿ ಧನಲಕ್ಷ್ಮಿ ಕುದ್ಪಾಜೆ ಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಇಂಗ್ಲೀಷ್ ಭಾಷೆಯ ಕಲಿಕೆಯ ಮಹತ್ವದ ಕುರಿತು ತಿಳಿಸಿದರು. ಸುಳ್ಯ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಮಮತಾ ಕೆ. ಸ್ಪೋಕನ್ ಇಂಗ್ಲೀಷ್ ಫೆಸ್ಟಿನ ಫಲಕವನ್ನು ಅನಾವರಣಗೊಳಿಸಿ ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ಕಾರ್ಯಕ್ರಮದ ಕುರಿತಾಗಿ ಮಾತನಾಡಿದರು. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮನ ಮೋಹನ ಪುತ್ತಿಲ ಕಾರ್ಯಕ್ರಮದ ಆ ಯೋಜನೆಯ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀಮತಿ ಮೀರಾ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಮತಿ ಸ್ವರ್ಣಲತಾ ಎಂ.ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲೆಯ ಆಂಗ್ಲಭಾಷಾ ಶಿಕ್ಷಕರಾದ ಶ್ರೀಮತಿ ಆಶಾ ಅಂಬೆಕಲ್ಲು ಇವರು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮದ ಆಯೋಜನೆಯ ಉದ್ದೇಶವನ್ನು ತಿಳಿಸಿದರು.
ಸ್ವಾಗತ ನೃತ್ಯದೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಇಂಗ್ಲಿಷ್ ಕಲಿಕೆಗೆ ಸಂಬಂಧಿಸಿದ ಚಟುವಟಿಕೆಗಳಾದ ನಾಟಕಗಳು, ಪ್ರಹಸನಗಳು, ಕಥೆ ಹೇಳುವುದು, ಸಂಭಾಷಣೆ, ಅಭಿನಯ ಗೀತೆ, ರಸಪ್ರಶ್ನೆ, ಇಂಗ್ಲಿಷ್ ಕಲಿಕೋಪಕರಣಗಳ ಪ್ರದರ್ಶನ, ವ್ಯಾಕರಣಕ್ಕೆ ಸಂಬಂಧಿಸಿದ ಚಟುವಟಿಕೆಗಳು ಸುಮಾರು 2 ಗಂಟೆಗಳ ಕಾಲ ಇಂಗ್ಲೀಷ್ ನಲ್ಲಿ ಮೂಡಿ ಬಂದಿತ್ತು.


ಶಾಲಾ ವಿದ್ಯಾರ್ಥಿನಿ ಕುಮಾರಿ ರಕ್ಷಿತಾ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿ ವಂದಿಸಿದರು. ವಿದ್ಯಾರ್ಥಿನಿ ಕುಮಾರಿ ಜಸ್ಸಿಕ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳೇ ಇಂಗ್ಲಿಷ್ ನಲ್ಲಿ ನಡೆಸಿಕೊಟ್ಟ ಈ ಕಾರ್ಯಕ್ರಮದಲ್ಲಿ ಪೋಷಕರು, ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶಾಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.