ಕೆವಿಜಿ ಐಪಿಎಸ್ ನಲ್ಲಿ ಮಹಿಳಾ ದಿನಾಚರಣೆ

0

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುವುದು ಅತಿ ಮುಖ್ಯ :ಡಾ. ಉಜ್ವಲ್ ಯು. ಜೆ.

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಮಾ. 8 ರಂದು ಮಹಿಳಾ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ ಅವರ ಮುಂದಾಳತ್ವದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಮಾತನಾಡಿ “ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಸಾಧನೆ ಮಾಡುವುದು ಅತಿ ಅಗತ್ಯ” ಎಂದರು.

ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಎಸ್. ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕಿಯಾದ ಶ್ರೀಮತಿ ಹೇಮಾ ವೈಲಾಯರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮವನ್ನು ಶಾಲಾ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಬಳಿಕ ಶಾಲಾ ಮಹಿಳಾ ಸಿಬ್ಬಂದಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜೇತರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಬಹುಮಾನ ವಿತರಿಸಿದರು.