ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿ., ಮಂಗಳೂರು ಸಹಕಾರ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ. ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮ ಮಾ.9 ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತಿ ಸಿ. ಉದ್ಘಾಟಿಸಿದರು. ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೋಟ್ಟು ಸಭಾಧ್ಯಕ್ಷತೆ ವಹಿಸಿದ್ದರು . ಮುಖ್ಯ ಅತಿಥಿಯಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್. ಎನ್. ಮನ್ಮಥ, ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ವಿಷ್ಣು ಭಟ್ ,ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎಸ್ ವಿ ಹಿರೇಮಠ, ತರಬೇತುದಾರರಾಗಿ ಮಂಗಳೂರು ಸಹಕಾರ ಸಂಘಗಳ ಉಪನಿಬಂಧಕ ರ ಕಚೇರಿಯ ಅಧೀಕ್ಷಕ ಎನ್ ಜೆ ಗೋಪಾಲ್, ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಮುಖ್ಯಕಾರ್ಯನಿರ್ವಾಹಣಾಧಿಕಾರಿ ವಿಶ್ವನಾಥ ನಾಯರ್,ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸದಾನಂದ ಕಾರ್ಜ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ನೇಮಿರಾಜ ಪಲ್ಲೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ವೇಳೆ ದ. ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ರಾಗಿ ಆಯ್ಕೆಯಾದ ಶಶಿಕುಮಾರ್ ರೈ ಬಾಲ್ಯೋಟ್ಟು ರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.









ಕಾರ್ಯಕ್ರಮದಲ್ಲಿ ಜಯಶ್ರೀ ಪ್ರಾರ್ಥಿಸಿದರು.ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎಸ್ ವಿ ಹಿರೇಮಠ ಸ್ವಾಗತಿಸಿದರು. ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ನೇಮಿರಾಜ ಪಲ್ಲೋಡಿ ವಂದಿಸಿದರು.










