ದುಗ್ಗಲಡ್ಕ ಶ್ರೀ ದುಗ್ಗಲಾಯ ನೇಮೋತ್ಸವದ ಕುರಿತು ಪೂರ್ವಭಾವಿ ಸಭೆ

0

ವಿವಿಧ ಉಪ ಸಮಿತಿಗಳ ರಚನೆ

ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ಮಾ.19ಮತ್ತು 20ರಂದು ವಾರ್ಷಿಕ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೇಮೋತ್ಸವ ನಡೆಯಲಿದ್ದು, ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ ಮಾ.9ರಂದು ಸಂಜೆ ದೈವಸ್ಥಾನದ ವಠಾರದಲ್ಲಿ ನಡೆಯಿತು.
ವೇದಿಕೆಯಲ್ಲಿ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ,ಅಧ್ಯಕ್ಷರಾದ ಕುಶಾಲಪ್ಪ ಗೌಡ ಕಜೆ, ಮಾಜಿ ಅಧ್ಯಕ್ಷರಾದ ದಯಾನಂದ ಸಾಲಿಯಾನ್ ಮೂಡೆಕಲ್ಲು, ಕಾರ್ಯದರ್ಶಿ ಶೇಖರ ಕುದ್ಪಾಜೆ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ರೈ, ಯುವ ಸೇವಾ ಸಮಿತಿ ಅಧ್ಯಕ್ಷ ನಾರಾಯಣ ನಾಯ್ಕ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಯಶಸ್ಸಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಪೂರ್ವಭಾವಿಯಾಗಿ ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಲಾಯಿತು.