ಎಲಿಮಲೆ : ಜ್ಞಾನದೀಪ ವಿದ್ಯಾಸಂಸ್ಥೆಯಲ್ಲಿ “ಚಿಣ್ಣರ ಚಿಲುಮೆ” ಕಾರ್ಯಕ್ರಮ

0

ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ಯಲ್ಲಿ ಮೂರರಿಂದ ಆರು ವರ್ಷದ ಒಳಗಿನ ಮಕ್ಕಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ “ಚಿಣ್ಣರ ಚಿಲುಮೆ” ಕಾರ್ಯಕ್ರಮ ಮಾ. 9 ರಂದು ನಡೆಯಿತು.

ಕಾರ್ಯಕ್ರಮವನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಚಂದ್ರಶೇಖರ ತಳೂರು ದೀಪ ಪ್ರಜ್ವಲನೆ ಯೊಂದಿಗೆ ಉದ್ಘಾಟಿಸಿದರು. ಪುಟಾಣಿ ವಿದ್ಯಾರ್ಥಿಗಳು ಸಾಮೂಹಿಕ ಪ್ರಾರ್ಥನೆಯನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟರಮಣ ಮಂಕುಡೆ ಭಾರತೀಯ ಸಂಸ್ಕೃತಿ ಮತ್ತು ಬಾಲಗೋಕುಲದ ಬಗ್ಗೆ ಉಪನ್ಯಾಸವನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಮಕ್ಕಳು ಮತ್ತು ಪೋಷಕರಿಗೆ ವಿವಿಧ ಸ್ಪರ್ಧೆಗಳ ನಡೆಸಿ ಬಹುಮಾನವನ್ನು ವಿತರಿಸಲಾಯಿತು. ಅಲ್ಲದೆ ವಿವಿಧ ಬಾಲ ಗೋಕುಲ ತಂಡದ ಹಾಗೂ ವಿವಿಧ ಸಂಸ್ಥೆಗಳ ಮಾತಾಜಿಯವರು ಉಪಸ್ಥಿತರಿದ್ದರು.

ಶಾಲಾ ಆಡಳಿತ ಮಂಡಳಿಯವರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ, ಪೋಷಕರು, ಪುಟಾಣಿ ಮಕ್ಕಳು ಉಪಸ್ಥಿತರಿದ್ದರು.

ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವು ಸಮಾಪನಗೊಂಡಿತು.