ಚೈತ್ರ ಯುವತಿ ಮಂಡಲ ಅಜ್ಜಾವರ, ಪ್ರತಾಪ ಯುವಕ ಮಂಡಲ ಅಜ್ಜಾವರ, ಜೇಸಿಐ ಸುಳ್ಯ ಪಯಸ್ವಿನಿ ಇವುಗಳ ಸoಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ
ಅಡ್ಪಂಗಾಯ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.

ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಚೈತ್ರ ಯುವತಿ ಮಂಡಲ ಅಧ್ಯಕ್ಷೆ ಶ್ರೀಮತಿ ಶಶ್ಮಿ ಭಟ್ ವಹಿಸಿದ್ದರು.















ಅಜ್ಜಾವರ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಲೀಲಾ ಮನಮೋಹನ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕರಾದ ಶ್ರೀಮತಿ ವಿಜಯ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷ ಸುರೇಶ್ ಕಾಮತ್, ಅಂಗನವಾಡಿ
ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಲಾವಣ್ಯ ರಾಹುಲ್, ಯುವತಿ ಮಂಡಲ ಗೌರವ ಸಲಹೆಗಾರರು ಶ್ರೀಮತಿ ಜಯಲಕ್ಷ್ಮಿ, ಅಡ್ಪoಗಾಯ ಸಮುದಾಯ ಆರೋಗ್ಯಾಧಿಕಾರಿ ಕು.ಭವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಡ್ಪಂಗಾಯ ಅಂಗನವಾಡಿ ಕೇಂದ್ರ ಕಾರ್ಯಕರ್ತೆ ಶ್ರೀಮತಿ ಭಾಗೀರಥಿ ಹಾಗೂ ಸಹಾಯಕಿ ಶ್ರೀಮತಿ ಚಿತ್ರಾವತಿ ಹೊನ್ನಪ್ಪ ಅಡ್ಪಂಗಾಯ ರವರನ್ನು ಗೌರವಿಸಲಾಯಿತು. ತಾಯಿ ಮಗುವಿನ ಭಾವಚಿತ್ರ ಸ್ಪರ್ಧೆಯಲ್ಲಿ 25 ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದು, ಹಾಗೂ ಅದೃಷ್ಟ ಮಹಿಳೆಯರು ಮುಂತಾದ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಾರ್ಥನೆಯನ್ನು ಶ್ರೀಮತಿ ಧನಲಕ್ಷ್ಮೀ ಸಂತೋಷ್ ನೆರವೇರಿಸಿದರು. ಪ್ರತಾಪ ಯುವಕ ಮಂಡಲ ಅಧ್ಯಕ್ಷ ಗುರುರಾಜ್ ಅಜ್ಜಾವರ ಸ್ವಾಗತಿಸಿ, ಕಾರ್ಯದರ್ಶಿ ನವೀನ್ ಕುಮಾರ್ ವಂದಿಸಿದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಶ್ರೀಮತಿ ರುಕ್ಮಿಣಿಪ್ರಕಾಶ್,ಯುವತಿ ಮಂಡಲ ಉಪಾಧ್ಯಕ್ಷೆ ಶ್ರೀಮತಿ ಮಾಲತಿಸೂರ್ಯ,ಯುವಕ ಮಂಡಲ ಕ್ರೀಡಾಕಾರ್ಯದರ್ಶಿ ಗೌರೀಶ್, ಕೋಶಾಧಿಕಾರಿ ಲೋಕೇಶ್ ರಾವ್ ,ಕು.ಪವಿತ್ರ,
ಕು.ಮಲ್ಲಿಕಾ ಮಾವಿನಪಳ್ಳ ,ಶ್ರೀಮತಿ ಉಷಾ ನವೀನ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.











