ಇಂದು ಸಂಜೆ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ
ಆಲೆಟ್ಟಿ ಗ್ರಾಮದ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವ ಇಂದಿನಿಂದ ಆರಂಭಗೊಂಡಿದ್ದು ಇಂದು ಬೆಳಗ್ಗೆ ಪ್ರಧಾನ ಅರ್ಚಕರಿಂದ ಉಷಾ ಪೂಜೆಯಾಗಿ, ಗಣಪತಿ ಹವನ ನೆರವೇರಿತು. ಬಳಿಕ ಉಗ್ರಾಣ ತುಂಬುವ ಕಾರ್ಯಕ್ರಮ ನಡೆಯಿತು.
















ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ಹಾಗೂ ಸಮಿತಿಯ ಸದಸ್ಯರು ಮತ್ತು ಭಜನಾ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಮಧ್ಯಾಹ್ನ ಮಹಾಪೂಜೆಯಾಗಿ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮಕ್ಕಳ ಯಕ್ಷಗಾನ ಪ್ತದರ್ಶನವಾಗಲಿರುವುದು.










