ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಆಶ್ರಯದಲ್ಲಿ ವಿಶೇಷ ಕಾರ್ಯಕ್ರಮ ಮಾ. 11 ರಂದು ನಡೆಯಿತು.
















ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದ ಮುಖ್ಯಸ್ಥೆ ಹಾಗೂ ಪ್ರಾಧ್ಯಾಪಕರಾದ ಡಾ. ಗೀತಾ ದೊಪ್ಪ ಭಾಗವಹಿಸಿ, ಹದಿಹರೆಯದ ಅರೋಗ್ಯ ಸಮಸ್ಯೆಗಳು ಮತ್ತು ಪರಿಹಾರಗಳ ಮಾಹಿತಿ ನೀಡಿದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ, ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶದ ನಿರ್ದೇಶಕರಾದ ಡಾ. ಮಮತಾ ಕೆ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥರಾದ ಭವ್ಯ ಪಿ.ಎಮ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿ ಕು. ಶ್ರೀಲಯ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.










