ಧಾರ್ಮಿಕ ಸಭೆ – ಸಾಂಸ್ಕೃತಿಕ ಕಾರ್ಯಕ್ರಮ,ಯಕ್ಷಗಾನ ಪ್ರದರ್ಶನ
ಆಲೆಟ್ಟಿ ಗ್ರಾಮದ ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕ ಮಹೋತ್ಸವದ ಪ್ರಯುಕ್ತ
ಮಾ.11 ರಂದು
ಪೂರ್ವಾಹ್ನ ಉಷಾ ಪೂಜೆಯಾಗಿ ಉಗ್ರಾಣ ತುಂಬುವ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಅನ್ನ ಸಂತರ್ಪಣೆ ನಡೆಯಿತು.
ಮಹೋತ್ಸವದ ಆರಂಭದ ದಿನದಂದು ಸಂಜೆ ಧಾರ್ಮಿಕ ಸಭೆಯು ನಡೆಯಿತು.
ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೋಲ್ಚಾರು ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಆಲೆಟ್ಟಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವೀಣಾ ವಸಂತ ಆಲೆಟ್ಟಿ ಯವರು
ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
















ರೋಟರಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಕಲ್ಮಡ್ಕ ಧಾರ್ಮಿಕ ಉಪನ್ಯಾಸ ನೀಡಿದರು.
ಮುಖ್ಯ ಅಭ್ಯಾಗತರಾಗಿ ರಾಜ್ಯ ಸಹಕಾರ ಪತ್ತಿನ ಸಂಘಗಳ ಮಹಾಮಂಡಳ ಬೆಂಗಳೂರು ನಿರ್ದೇಶಕ ಚಂದ್ರ ಕೋಲ್ಚಾರು, ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಪ್ರಕಾಶ್ ಕುಂಚಡ್ಕ, ಆಲೆಟ್ಟಿ
ಗ್ರಾಮ ಪಂಚಾಯತ್
ಉಪಾಧ್ಯಕ್ಷೆ ಶ್ರೀಮತಿ ಕಮಲ ಕುಮಾರ್ ನಾಗಪಟ್ಟಣ,ಪಂಚಾಯತ್ ಸದಸ್ಯೆ ಶ್ರೀಮತಿ ಮೀನಾಕ್ಷಿ ಕೆ, ವ್ಯವಸ್ಥಾಪನಾ ಸದಸ್ಯರಾದ ಬಿ.ಬಾಬು ಗೌಡ ಕಡೆಂಗ, ರಾಧಾಕೃಷ್ಣ ಕೋಲ್ಚಾರು, ತಂಗವೇಲು ನಾಗಪಟ್ಟಣ, ಶ್ರೀಮತಿ ವಿಜಯಕುಮಾರಿ, ಶಾಸ್ತಾವೇಶ್ವರ ಭಜನಾ ಸಂಘದ ಅಧ್ಯಕ್ಷ ಹೂವಾನಂದ ಬಾರ್ಪಣೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕು.ಸಾಹರಿಕಾ ನಾಗಪಟ್ಟಣ ಪ್ರಾರ್ಥಿಸಿದರು. ಪ್ರಾಸ್ತಾವಿಕ ಮಾತಿನೊಂದಿಗೆ ವ್ಯ.ಸ.ಸದಸ್ಯ ಸುಧಾಮ ಆಲೆಟ್ಟಿ ಸ್ವಾಗತಿಸಿದರು. ರಾಧಾಕೃಷ್ಣ ಕೋಲ್ಚಾರು ವಂದಿಸಿದರು. ಎ.ಕೆ.ಮೋಹನ ಅರಂಬೂರು ಕಾರ್ಯಕ್ರಮ ನಿರೂಪಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ ನಾಗಪಟ್ಟಣ ಅಂಗನವಾಡಿ ಮಕ್ಕಳಿಂದ ಮತ್ತು ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಗಾನ ನೃತ್ಯ ಅಕಾಡೆಮಿ ಮಂಗಳೂರು ಸುಳ್ಯ ಶಾಖೆಯ ವಿದ್ಯಾರ್ಥಿಗಳಿಂದ ನೃತ್ಯ ವೈವಿಧ್ಯಮಯ ಕಾರ್ಯಕ್ರಮ ಹಾಗೂ ಮಿತ್ರ ಕಲಾ ವೇದಿಕೆ ಬಾರ್ಪಣೆಯ ವಿದ್ಯಾರ್ಥಿಗಳಿಂದ ಪಾಂಚಜನ್ಯ ಎಂಬ ಯಕ್ಷಗಾನ ಪ್ರಸಂಗ ಪ್ರದರ್ಶನವಾಯಿತು. ಆಗಮಿಸಿದ
ಎಲ್ಲರಿಗೂ ರಾತ್ರಿ ಅನ್ನ ಸಂತರ್ಪಣೆಯಾಯಿತು.










