
ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಾ.12 ರಂದು ಒಡಿಯೂರು ಗುರುದೇವಾನಂದ ಸ್ವಾಮೀಜಿ ಯವರು ಭೇಟಿ ನೀಡಿದರು.















ಒಡಿಯೂರು ಗ್ರಾಮ ವಿಕಾಸ ಯೋಜನೆಯ ಮಂಡೆಕೋಲು ಘಟ ಸಮಿತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಒಡಿಯೂರು ಶ್ರೀಗಳು ಕಾರ್ಯಕ್ರಮ ಮುಗಿಸಿ ಬಳಿಕ ಸಹಕಾರ ಸಂಘಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಮುಖ್ಯಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್, ಸಹಕಾರ ಸಂಘದ ನಿರ್ದೇಶಕರು, ಸಿಬ್ಬಂದಿಗಳು ಮೊದಲಾದವರಿದ್ದರು ಸ್ವಾಮೀಜಿಯವರ ಆಶೀರ್ವಾದ ಪಡೆದರು.










