
ಜಿಲ್ಲಾ ಪಂಚಾಯತ್ ಕೊಡಗು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಡಿಕೇರಿ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತ ನಿಧಿ ಕೇಂದ್ರ ಹಾಗೂ ಜಿಲ್ಲಾ ಆಸ್ಪತ್ರೆ ಮಡಿಕೇರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಉದ್ಭವ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಸ್ಥೆ ಬೆಂಗಳೂರು ಮತ್ತು ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಬಾಲಚಂದ್ರ ಕಳಗಿ ಅಭಿಮಾನಿ ಬಳಗ ಸಂಪಾಜೆ ಇವರ ಸಂಯುಕ್ತ ಆಶ್ರಯದಲ್ಲಿ ಸಂಪಾಜೆ ಗ್ರಾಮದ ದಿ. ಬಾಲಚಂದ್ರ ಕಳಗಿಯವರ ಸ್ಮರಣಾರ್ಥವಾಗಿ ನಡೆಯುವ ಬಲಿದಾನ ದಿವಸ್ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಇಂದು ಸಂಪಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆಯಿತು.
















ಪಂಚಾಯತ್ ಅಧ್ಯಕ್ಷೆ ಶ್ರೀಮತಿ ರಮಾದೇವಿ ಕಳಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಠಲ ಮಾಸ್ತರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಡಿಕೇರಿ ಆರೋಗ್ಯ ಕೇಂದ್ರದ ಡಾ. ಪ್ರಿಯ ಉಪಸ್ಥಿತರಿದ್ದರು.

ಸಂಪಾದಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಮಲ್ಲಿಕಾರ್ಜುನ ಸ್ವಾಗತಿಸಿ, ಹೆಲ್ತ್ ಇನ್ಸ್‌ಪೆಕ್ಟರ್ ರಾಕೇಶ್ ವಂದಿಸಿದರು.
ದಿ. ಬಾಲಚಂದ್ರ ಕಳಗಿ ಯವರ ಅಭಿಮಾನಿಗಳು, ಊರವರು ರಕ್ತದಾನ ಮಾಡಿದರು.











