ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಹಾಗೂ ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಸಹಯೋಗದಲ್ಲಿ ವಾರ್ಷಿಕ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ ಮಾ.19 ರಂದು ಎನ್.ಎಮ್.ಸಿ ಕ್ರೀಡಾಂಗಣದಲ್ಲಿ ನಡೆಯಿತು.















ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಮುಖ್ಯ ಅತಿಥಿಯಾಗಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಮ್.ಎಮ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಡೀನ್ ಡಾ. ನೀಲಾಂಬಿಕೈ ನಟರಾಜನ್ ಉಪಸ್ಥಿತರಿದ್ದರು. ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಇದರ ಪ್ರಾಂಶುಪಾರಾದ ಪ್ರೊ. ಬಿ.ಎಮ್ ಪ್ರೇಮ ಪ್ರಾಸ್ತವಿಕ ಮಾತುಗಳೊಂದಿಗೆ ಸ್ವಾಗತಿಸಿ, ಉಪನ್ಯಾಸಕಿ ಲವೀನಾ ಕೆ.ಎ ವಂದಿಸಿದರು. ಪ್ರೊ. ಪ್ರಮೋದ್ ಕೆ.ಜೆ ಕ್ರೀಡಾಳುಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿನಿ ರೇಣುಕಾ ಪ್ರಾರ್ಥಿಸಿದರು. ವಿದ್ಯಾರ್ಥಿನಿ ಮಾಳವಿಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದೈಹಿಕ ಶಿಕ್ಷಣ ನಿರ್ದೇಶಕರು ಮಿಥನ್, ನೆಹರೂ ಮೆಮೋರಿಯಲ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರು ಸೀತಾರಾಮ ಎಮ್.ಡಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ವಿದ್ಯಾರ್ಥಿಗಳು, ಭೋದಕ ಮತ್ತು ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.










