ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ ಮಾ. 23ರಂದು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.















ಸುಮಾರು 80ಕ್ಕಿಂತಲೂ ಹೆಚ್ಚು ಮಂದಿ ಶಿಬಿರದಲ್ಲಿ ಪಾಲ್ಗೊಂಡು ಸದುಪಯೋಗ ಪಡೆದುಕೊಂಡರು.

ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ್ ಕಾಮತ್, ಉಪಾಧ್ಯಕ್ಷ ವೆಂಕಪ್ಪ ನಾಯ್ಕ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ,
ಸಹಕಾರಿ ಸಂಘದ ಮಾಜಿ ಅಧ್ಯಕ್ಷ ನಾರಾಯಣ ಬೊಮ್ಮೆಟ್ಟಿ, ಹಾಲಿ ನಿರ್ದೇಶಕರುಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.










