














ಬಳ್ಪ ಗ್ರಾಮ ದೈವಸ್ಥಾನ ಕುಮನಮಾಳ್ಯ ಶ್ರೀ ರಾಜನ್ ದೈವ ಉಳ್ಳಾಕುಲು ಮತ್ತು ಶಿರಾಡಿ ರಾಜನ್ ದೈವ ಹಾಗೂ ಪರಿವಾರ ದೈವಗಳ ಸಾನಿಧ್ಯದಲ್ಲಿ ಮಾಡ ನಿರ್ಮಾಣ ಹಾಗೂ ಇನ್ನುಳಿದ ಅಭಿವೃದ್ಧಿ ಕಾರ್ಯಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ರೂಪಾಯಿಗಳ ಡಿಡಿಯನ್ನು ನೀಡಲಾಯಿತು. ತಾಲೂಕು ಯೋಜನಾಧಿಕಾರಿ ಡಿ.ಡಿ ಹಸ್ತಾoತರಿಸಿದರು. ದೈವಸ್ಥಾನದ ಆಡಳಿತ ಸಮಿತಿ ಮತ್ತು ಜೀರ್ಣೋದ್ಧಾರ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.










