ಸಂಪಾಜೆ: ಚೆಂಬು ಗ್ರಾಮದ ನೀಲಮ್ಮರಿಗೆ ವಾತ್ಸಲ್ಯ ಮನೆ ಹಸ್ತಾಂತರ

0

ಮಡಿಕೇರಿ ತಾಲೂಕಿನ ಸಂಪಾಜೆ ವಲಯದ ಚೆಂಬು ಗ್ರಾಮದ ನೀಲಮ್ಮರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಕಾರ್ಯಕ್ರಮದಡಿ ಮನೆ ದುರಸ್ತಿಗೊಳಿಸಿ, ಮನೆ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಜಿಲ್ಲೆಯ ನಿರ್ದೇಶಕಿ ಶ್ರೀಮತಿ ಲೀಲಾವತಿ ಮತ್ತು ಒಕ್ಕೂಟದ ಅಧ್ಯಕ್ಷೆ ತಾರಾರವರು ಕಾರ್ಯಕ್ರಮ ಉದ್ಘಾಟನೆ ಗೈದರು. ಬಳಿಕ ಯೋಜನೆಯ ಕಾರ್ಯಕ್ರಮಗಳಾದ ಮಾಸಾಶನ, ವಾತ್ಸಲ್ಯ ಕಾರ್ಯಕ್ರಮ, ಮಹಿಳೆಯರ ಸಬಲೀಕರಣದ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳು, ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು, ಸೇವಾ ಪ್ರತಿನಿಧಿಯವರು ಉಪಸ್ಥಿತರಿದ್ದರು.
ವಲಯದ ಮೇಲ್ವಿಚಾರಕರಾದ ಸಂತೋಷ್ ಸ್ವಾಗತಿಸಿದರು. ಗ್ರಾಮಸ್ಥರಾದ ರಮೇಶ್ ಯೋಜನೆಯ ಕಾರ್ಯಕ್ರಮದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿ, ವಂದಿಸಿದರು.