ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ಆರೋಪಿ ಶಾಫಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಿ
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ಎಸ್.ಡಿ.ಪಿ.ಐ. ನಾಯಕ ಶಾಫಿ ಬೆಳ್ಳಾರೆ ಯವರನ್ನು ಬೇರೊಂದು ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.
2017 ರಲ್ಲಿ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.
ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್ ಹತ್ಯೆ ಪ್ರಕರಣದಲ್ಲಿ ಎರಡು ವರ್ಷದ ಹಿಂದೆ ಎನ್.ಐ.ಎ ಬಂಧಿಸಿ ನ್ಯಾಯಾಂಗ ಬಂಧನಲ್ಲಿದ್ದಾರೆ. ಈ ವರೆಗೂ ಜಾಮೀನು ಮಂಜೂರಾಗಿಲ್ಲ. ಇಂದು ಕೋರ್ಟ್ ಗೆ ಹಾಜರು ಪಡಿಸಿದ ಅವರನ್ನು ಮತ್ತೆ ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ.

























