ಪೆರುವಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 3 ಕಂಪ್ಯೂಟರ್ ಗಳ ಕೊಡುಗೆ

0

ಕಾರ್ಪೊರೇಟಿವ್ ಸಾಮಾಜಿಕ ಹೊಣೆಗಾರಿಕೆ ಯೋಜನೆ ಅಡಿಯಲ್ಲಿ ಕೆ.ವಿ.ಜಿ ಗ್ರಾಮೀಣ ಬ್ಯಾಂಕ್ ಬೆಳ್ಳಾರೆ ಶಾಖೆಯ ಮ್ಯಾನೇಜರ್ ನವೀನ್ ಅವರೊಂದಿಗೆ ಶ್ರೀಮತಿ ರೇಖಾ ಕಿರಣ್ ಕುಂತೂರ್ ಪದವು, ಚಿತ್ರಕಲಾ ಶಿಕ್ಷಕ ಕಿಶೋರ್ ರವರು ಶಾಲೆ ವಿದ್ಯಾರ್ಥಿಗಳಿಗೆ ಮೂರು ಕಂಪ್ಯೂಟರ್ ಅನ್ನು ಕೊಡುಗೆಯಾಗಿ ನೀಡಿರುತ್ತಾರೆ. ಇದಕ್ಕಾಗಿ ಪೋಷಕರಾದ ಶ್ರೀಮತಿ ಪೂರ್ಣಿಮಾ ಉಮೇಶ್ ಶ್ರಮಿಸಿರುತ್ತಾರೆ.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಜಯ ಆಚಾರ್ಯ, ಉಪಾಧ್ಯಕ್ಷರಾದ ಶ್ರೀಮತಿ ಸವಿತಾ ಪೆರುವಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮನಾಭ ಶೆಟ್ಟಿ, ಮುಖ್ಯೋಪಾಧ್ಯಾಯರಾದ ಶ್ರೀಮತಿ ಶ್ರುತಿ , ಎಸ್ಡಿ.ಎಂ.ಸಿ ಸದಸ್ಯರು , ಪೋಷಕರು, ಅಡುಗೆ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.