ಎಲಿಮಲೆ ಸರಕಾರಿ ಪ್ರೌಢಶಾಲೆ ಯಲ್ಲಿ 28 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ವಯೋ ನಿವೃತ್ತರಾಗುತ್ತಿರುವ ಶ್ರೀಮತಿ ತಿರುಮಲೇಶ್ವರಿ ಯು. ಎಸ್. ಅವರಿಗೆ ಅಭಿನಂದನೆ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮವು ಶಾಲಾ ಸಭಾಂಗಣದಲ್ಲಿ ನಡೆಯಿತು.
ಅಭಿನಂದನಾ ಭಾಷಣ ಮಾಡಿದ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ದಯಾನಂದ ಎನ್.ಕೆ. ಯವರು, ತಿರುಮಲೇಶ್ವರಿಯವರು ಶಿಸ್ತು, ಶ್ರದ್ಧೆ ಮತ್ತು ಉದಾರತೆಯನ್ನು ಮೈಗೂಡಿಸಿಕೊಂಡಿದ್ದು, ಸಚ್ಚಾರಿತ್ರ್ಯ, ಪ್ರಾಮಾಣಿಕತೆ ಹಾಗೂ ಸತ್ಯಸಂಧತೆಗೆ ಮಾದರಿಯಾಗಿ, ತಮ್ಮ ಸೇವಾವಧಿಯುದ್ದಕ್ಕೂ ವಿದ್ಯಾರ್ಥಿಗಳು ಮತ್ತು ಸಮುದಾಯದ ಮೆಚ್ಚುಗೆ ಪಾತ್ರರಾಗಿದ್ದರು” ಎಂದರು.









ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷರಾದ ಧನಂಜಯ ಬಾಳೆತೋಟ ವಹಿಸಿದ್ದರು. ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು, ಜ್ಞಾನದೀಪ ವಿದ್ಯಾಸಂಸ್ಥೆಯ ಸಂಚಾಲಕರಾದ ಎ.ವಿ ತೀರ್ಥರಾಮ ಅಂಬೆಕಲ್ಲು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನಾರಾಯಣ ಗೌಡ ಬಾಳೆತೋಟ, ನಿವೃತ್ತ ಮುಖ್ಯ ಶಿಕ್ಷಕರಾದ ಚಂದ್ರಶೇಖರ್ ಪೇರಾಲು ಮತ್ತು ಪುರುಷೋತ್ತಮ ಕೇಪಳಕಜೆ, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ನಾರಾಯಣ ಗೌಡ ಮಾವಿನಗೊಡ್ಲು,ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಅಂಬೆಕಲ್ಲು, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ ಉಪಸ್ಥಿತರಿದ್ದರು.
ಈ ಸಂದರ್ಭ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶ್ರೀಮತಿ ತಿರುಮಲೇಶ್ವರಿ ಯು ಎಸ್ ಇವರ ಸಂಬಂಧಿಕರು,
ಹಿರಿಯ ವಿದ್ಯಾರ್ಥಿಗಳು, ಪೋಷಕರು, ವಿಧ್ಯಾಭಿಮಾನಿಗಳು,
ಶಿಕ್ಷಕರು, ಶಾಲಾ ಸಿಬ್ಬಂದಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಿಬ್ಬಂದಿಗಳು, ತಾಲೂಕಿನ ವಿವಿಧ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಮುಖ್ಯ ಶಿಕ್ಷಕಿ ಸಂಧ್ಯಾ ಕೆ ಸ್ವಾಗತಿಸಿದರು. ಅಭಿನಂದನಾ ಪತ್ರವನ್ನು ಗೌರವ ಶಿಕ್ಷಕಿ ಕುಮಾರಿ ಜನನಿ ಕಜೆ ವಾಚಿಸಿದರು. ಗೌರವ ಶಿಕ್ಷಕಿ ಕುಮಾರಿ ಸಂಗೀತ ಧನ್ಯವಾದ ಅರ್ಪಿಸಿದರು.ಶಿಕ್ಷಕರಾದ ಮುರಳೀಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.
ತಿರುಮಲೇಶ್ವರಿ ಯು ಎಸ್ ಇವರು ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಮಾರ್ಚ್ 12, 1997 ರಿಂದ ಎಪ್ರಿಲ್ 2025 ರವರೆಗೆ 28 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದು, ಇದೇ ತಿಂಗಳಿನಲ್ಲಿ ವಯೋ ನಿವೃತ್ತಿ ಹೊಂದಲಿದ್ದಾರೆ. ತಿರುಮಲೇಶ್ವರಿಯವರನ್ನು ಶುಭ ಹಾರೈಕೆಗಳೊಂದಿಗೆ, ಹಿರಿಯ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ಮತ್ತು ವಿಧ್ಯಾಭಿಮಾನಿಗಳು ಜೊತೆಯಾಗಿ ತೆರೆದ ವಾಹನದಲ್ಲಿ ಮನೆಯವರೆಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಅವರ ಕುರಿತಾಗಿ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಹೊರತರಲಾದ ಸಾಕ್ಷ್ಯಚಿತ್ರವನ್ನು ಬಿಡುಗಡೆಗೊಳಿಸಿ ಪ್ರದರ್ಶಿಸಲಾಯಿತು.










