ಕೇನ್ಯದ ಸ್ವಾಮಿ ಕೊರಗಜ್ಜ ಗೆಳೆಯರ ಬಳಗ ಕಾಯಂಬಾಡಿ- ಕಣ್ಕಲ್ ಮತ್ತು ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮತ್ತು ಕಡಬ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಆಶ್ರಯದಲ್ಲಿ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಕಾಯಂಬಾಡಿ -ಕಣ್ಕಲ್ ಇದರ ವಠಾರದಲ್ಲಿ ಎ.12.ರಂದು ನಡೆಯಿತು. ಬಳ್ಪ ಗ್ರಾಮ ಪಂಚಾಯತ್ ಅಧ್ಯಕ್ಷ ಹರ್ಷಿತ್ ಕಾರ್ಜ ಉದ್ಘಾಟಿಸಿದರು.

ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಸಭಾಧ್ಯಕ್ಷತೆ ವಹಿಸಿದ್ದರು.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಸದಾನಂದ ಕಾರ್ಜ, ಉಪ ವಲಯ ಅರಣ್ಯಾಧಿಕಾರಿ ಸಂತೋಷ್ ಕುಮಾರ್ ರೈ, ಸುಳ್ಯ ತಾಲೂಕು ಯುವ ಜನ ಸಂಯುಕ್ತ ಮಂಡಳಿ ಉಪಾಧ್ಯಕ್ಷ ಪವನ್ ಪಲ್ಲತ್ತಡ್ಕ, ಉದ್ಯಮಿ ಸದಾನಂದ ರೈ ಅರ್ಗುಡಿ, ಗ್ರಾಮ ಪಂಚಾಯತ್ ಸದಸ್ಯ ರಾಜೀವ್ ಗೌಡ ಕಣ್ಕಲ್, ಶ್ರೀ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದ ಅಧ್ಯಕ್ಷ ಭರತ್ ಕೊಳಂಬೆ, ಕಾಯಂಬಾಡಿ ಕೊರಗಜ್ಜ ಗೆಳೆಯರ ಬಳಗದ ಅಧ್ಯಕ್ಷ ಪ್ರಶಾಂತ್ ಕಾಯಂಬಾಡಿ ಉಪಸ್ಥಿತರಿದ್ದರು. ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.








ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ದೇವಿಪ್ರಸಾದ್ ರೈ ಗೆಜ್ಜೆ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಪ್ರವೀಣ್ ಪೇರಳಕಟ್ಟೆ ವಂದಿಸಿದರು. ಯುವರಾಜ್ ಕಣ್ಕಲ್ ಕಾರ್ಯಕ್ರಮ ನಿರೂಪಿಸಿದರು.












