ಭಾಗವಹಿಸಲು ಒಕ್ಕೂಟದಿಂದ ಮನವಿ
ವಖ್ಫ್ ತಿದ್ದುಪಡಿಯನ್ನು ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಭಯ ಖಾಜಿ ಯವರ ಮುಂದಾಳತ್ವದಲ್ಲಿ ಏಪ್ರಿಲ್ 18 ರಂದು ಅಡ್ಯಾರಿನಲ್ಲಿ ನಡೆಯಲಿರುವ ಪ್ರತಿಭಟನೆ ಗೆ ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟ ಬೆಂಬಲ ಸೂಚಿಸಿದೆ.















ವಖ್ಫ್ ತಿದ್ದುಪಡಿ ಕಾನೂನನ್ನು ಕೇಂದ್ರ ಸರಕಾರ ಜಾರಿಗೆ ತಂದಿರುವುದನ್ನು ವಿರೋಧಿಸಿ ಹಮ್ಮಿಕೊಂಡಿರುವ ಈ ಬೃಹತ್ ಪ್ರತಿಭಟನಾ ಸಭೆಗೆ ಸುಳ್ಯ ತಾಲೂಕಿನ ಮುಸ್ಲಿಂ ಸಮುದಾಯದ ಪ್ರತಿಯೊಬ್ಬರು ಸ್ವಯಂ ಪ್ರೇರಿತರಾಗಿ ಭಾಗವಹಿಸಿ ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಸಂಚಾಲಕರಾದ ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಸಹ ಸಂಚಾಲಕರಾದ ಉಮ್ಮರ್ ಕೆ ಎಸ್ ರವರು ಪತ್ರಿಕಾ ಪ್ರಕಟಣೆ ಮೂಲಕ ವಿನಂತಿಸಿ ಕೊಂಡಿರುತ್ತಾರೆ.










