








ಕೇಂದ್ರ ಸರಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಕರ್ನಾಟಕ ಉಲಮಾ ಕೋಆರ್ಡಿನೇಶನ್ ವತಿಯಿಂದ ಎ.18 ರಂದು ಮಂಗಳೂರಿನ ಅಡ್ಯಾರ್ ಕಣ್ಣೂರಿನಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಗೆ ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ ಬೆಂಬಲ ಸೂಚಿಸಿದೆ. ಪ್ರತಿಭಟನಾ ಸಭೆಯಲ್ಲಿ ಜಮಾಅತ್ ನ ಪ್ರತಿಯೊಬ್ಬರು ಭಾಗವಹಿಸುವಂತೆ ಸಮಸ್ತ ಸಂಯುಕ್ತ ಜಮಾಅತ್ ಅಧ್ಯಕ್ಷರಾದ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ ಹಾಗೂ ಕಾರ್ಯದರ್ಶಿ ಅಶ್ರಫ್ ಗುಂಡಿ ಪತ್ರಿಕಾ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.










