ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್, ಸ್ಪೂರ್ತಿ ಸಂಜೀವಿನಿ ಒಕ್ಕೂಟ ನೆಲ್ಲೂರು ಕೆಮ್ರಾಜೆ ವತಿಯಿಂದ ಮೂರು ದಿನಗಳ ಮಹಿಳಾ ಟೈಲರಿಂಗ್, ಕರ ಕಸೂತಿ ಹಾಗೂ ಎಂಬ್ರಾಯಿಡರಿ ತರಬೇತಿ ಕಾರ್ಯಾಗಾರವು ಎ.15 ರಂದು ನೆಲ್ಲೂರು ಕೆಮ್ರಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

ತರಬೇತಿಯನ್ನು ನೆಲ್ಲೂರು ಕೆಮ್ರಾಜೆ ಗ್ರಾ.ಪಂ.ಉಪಾಧ್ಯಕ್ಷೆ ಶ್ರೀಮತಿ ವಂದನಾ ಹೊಸ್ತೋಟ ಉದ್ಘಾಟಿಸಿದರು. ಸ್ಪೂರ್ತಿ ಸಂಜೀವನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಮಮತಾ ಎಂ.ಕೆ. ಅಧ್ಯಕ್ಷತೆ ವಹಿಸಿದ್ದರು.















ಮುಖ್ಯ ಅತಿಥಿಗಳಾಗಿ ನೆಲ್ಲೂರು ಕೆಮ್ರಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಬಿ., ಎನ್.ಆರ್.ಎಲ್.ಎಂ. ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಶ್ರೀಮತಿ ಶ್ವೇತಾ, ಎನ್.ಆರ್.ಎಲ್.ಎಂ. ವಲಯ ಬ್ಲಾಕ್ ಮೇನೇಜರ್ ಶ್ರೀಮತಿ ರೂಪಾ, ಗ್ರಾ.ಪಂ.ಮಾಜಿ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಬೊಳ್ಳಾಜೆ, ತರಬೇತುದಾರರಾದ ಶ್ರೀಮತಿ ಮಂಜುಳಾ ಭಾಗವಹಿಸಿದ್ದರು. ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಕಾರ್ಯಕ್ರಮಕ್ಕೆ ಭೇಟಿ ನೀಡಿದರು.
ಒಕ್ಕೂಟದ ಕಾರ್ಯದರ್ಶಿ ಶ್ರೀಮತಿ ಶಾಲಿನಿ ಹರಿಪ್ರಸಾದ್ ಎಲಿಮಲೆ ಸ್ವಾಗತಿಸಿದರು. ಶ್ರೀಮತಿ ಭವ್ಯ ಕಜೆ ಕಾರ್ಯಕ್ರಮ ನಿರೂಪಿಸಿದರು. ಮಮತಾ ಪಿ. ವಂದಿಸಿದರು. ಶ್ರೀಮತಿ ದಮಯಂತಿ ಪ್ರಾರ್ಥಿಸಿದರು.
ಸುಮಾರು 30 ಮಹಿಳೆಯರು ತರಬೇತಿಯಲ್ಲಿ ಭಾಗವಹಿಸಿದ್ದರು. ನೆಲ್ಲೂರು ಕೆಮ್ರಾಜೆ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಎನ್. ಆರ್.ಎಲ್.ಎಂ. ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಸದಸ್ಯರು ಸಹಕರಿಸಿದರು.










