ಎ.22; ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ವತಿಯಿಂದ ಮಕ್ಕಳ ಚೆಸ್ ಸ್ಪರ್ಧೆ

0

ಸುಳ್ಯ ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ವತಿಯಿಂದ ಮಕ್ಕಳ ಚೆಸ್ ಸ್ಪರ್ಧಾ ಕಾರ್ಯಕ್ರಮ ಎ.22 ರಂದು ಪೂ.8.30ರಿಂದ ಗೌಡ ಸಮುದಾಯ ಭವನ ಕೊಡಿಯಾಲಬೈಲ್ ಸುಳ್ಯ ಇಲ್ಲಿ ನಡೆಯಲಿದೆ‌.
ಸಭಾಧ್ಯಕ್ಷತೆಯನ್ನು ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವಿನುತಾ ಪಾತಿಕಲ್ಲು ವಹಿಸಲಿದ್ದಾರೆ. ಉದ್ಘಾಟನೆಯನ್ನು ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ.ನೆರವೇರಿಸಲಿದ್ದಾರೆ. ಅತಿಥಿಗಳಾಗಿ ಗೌಡರ ಯುವಸೇವಾ ಸಂಘದ ಅಧ್ಯಕ್ಷರಾದ ಪಿ.ಎಸ್.ಗಂಗಾಧರ್, ಅರೆಭಾಷೆ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ, ವೆಂಕಟರಮಣ ಸೊಸೈಟಿ ಉಪಾಧ್ಯಕ್ಷ ದಿನೇಶ್ ಮಡಪ್ಪಾಡಿ, ಎಂಜಿಎಂ ವಿದ್ಯಾಸಂಸ್ಥೆಗಳ ಸಂಚಾಲಕ ದೊಡ್ಡಣ್ಣ ಬರೆಮೇಲು, ಗೌಡ ಮಹಿಳಾ ಘಟಕದ ಸ್ಥಾಪಕಾಧ್ಯಕ್ಷೆ ಶ್ರೀಮತಿ ರೇಣುಕಾ ಸದಾನಂದ ಜಾಕೆ, ನಿಕಟಪೂರ್ವಾಧ್ಯಕ್ಷೆ ಶ್ರೀಮತಿ ಪುಷ್ಪಾ ರಾಧಾಕೃಷ್ಣ, ತರುಣ ಘಟಕದ ಅಧ್ಯಕ್ಷ ಪ್ರೀತಂ ಕೇರ್ಪಳ ಭಾಗವಹಿಸಲಿದ್ದಾರೆ.