ಮನವಿಗೆ ಸ್ಪಂದಿಸಿದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್









ಯೇನೆಕಲ್ಲು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಹಾಗೂ ಉಳ್ಳಾಕುಲು, ಉಳ್ಳಾಳ್ತಿ, ಬಚ್ಚನಾಯಕ ದೈವಸ್ಥಾನದ ಎದುರು ಹರಿಯುವ ಹೊಳೆಗೆ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣ ಮಾಡಬೇಕೆಂದು ಕಡಬ ತಾ.ಪಂ. ನಿಕಟಪೂರ್ವ ಸದಸ್ಯ ಅಶೋಕ್ ನೆಕ್ರಾಜೆಯವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಿಗೆ ಮನವಿ ನೀಡಿದ್ದರು.
ಮನವಿಯನ್ನು ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಸೇತುವೆ ಮತ್ತು ಅಣೆಕಟ್ಟು ನಿರ್ಮಾಣಕ್ಕೆ ಅಸ್ತು ಎಂದಿದ್ದು, ಕರ್ನಾಟಕ ನೀರಾವರಿ ನಿಗಮಕ್ಕೆ ಸ್ಥಳ ಸರ್ವೆ ಮಾಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದು, ಅವರ ಶಿಫಾರಸಿನ ಮೇರೆಗೆ ವಾರಾಹಿ ನೀರಾವರಿ ನಿಗಮ ಸಿದ್ಧಾಪುರ, ಉಡುಪಿ ಇದರ ಇಂಜಿನಿಯರ್ ಗಳ ತಂಡ ಯೇನೆಕಲ್ಲಿಗೆ ಆಗಮಿಸಿ ಪ್ಲಾನ್ ಮತ್ತು ಎಸ್ಟಿಮೇಟ್ ತಯಾರಿಸುತ್ತಿದ್ದಾರೆ. ಈ ಯೋಜನೆ ಅನುಷ್ಠಾನಗೊಂಡರೆ ಸಾವಿರಾರು ದೇವರ ಮೀನುಗಳ ರಕ್ಷಣೆ, ನೂರಾರು ಎಕ್ರೆ ಕೃಷಿ ಭೂಮಿಗೆ ನೀರಾವರಿ ವ್ಯವಸ್ಥೆಯ ಜೊತೆಗೆ ಯೇನೆಕಲ್ಲು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳ್ಳಲಿದೆ ಎಂದು ಅಶೋಕ್ ನೆಕ್ರಾಜೆ ಸುದ್ದಿಗೆ ತಿಳಿಸಿದ್ದಾರೆ.










