








ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ 25ನೇ ವರ್ಷದ ರಜತ ಸಂಭ್ರಮದ ಪ್ರಯುಕ್ತ ದ. ಕ ಸಂಪಾಜೆ ವಲಯದ ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವು ಏ 19ರಂದು ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮನ್ವಯ ಸಭಾಂಗಣದಲ್ಲಿ ನಡೆಯಿತು. ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಜಿಲ್ಲಾ ಮೇಲ್ವಿಚಾರಕರಾದ ರಂಜಿತ್ ಕುಮಾರ್ , ಜಿಲ್ಲಾ ಬ್ಯಾಂಕಿನ ಸಂಪಾಜೆ ಶಾಖಾ ವ್ಯವಸ್ಥಾಪಕಿ ಶ್ರೀಮತಿ ಸುಲೋಚನಾ ಸುಧಾಕರ್ , ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಜಾನಿ ಕೆ ಪಿ, ಹಮೀದ್ ಜಿ. ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ವೀರೇಂದ್ರ ಕುಮಾರ್ ಜೈನ್, ಸುಳ್ಯತಾಲೂಕು ಮೇಲ್ವಿಚಾರಕರಾದ ಶ್ರೀಧರ ಮಾಣಿಮರ್ದು, ವಲಯ ಪ್ರೇರಕಿ ಜಯಶ್ರೀ ಹಾಗೂ ನವೋದಯ ಸ್ವ-ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.










