ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಅಧ್ಯಯನ ಪೀಠದ ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ನಡೆದ ” ಕನಕ ತೀರ್ಥ ಗಂಗೋತ್ರಿ ” ಕನಕ ದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮದ ಪದವಿ ವಿಭಾಗದಲ್ಲಿ ಸುಳ್ಯ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಯ ಮಧುವನ ಆಯ್ಕೆಗೊಂಡು ಕನಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಎ. 21 ರಂದು ಮಂಗಳೂರು ವಿಶ್ವವಿದ್ಯಾಲಯದ ಡಾ.ಯು.ಆರ್.ರಾವ್ ಸಭಾಂಗಣದಲ್ಲಿ ನಡೆದ ಕನಕಸ್ಮೃತಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಇವರಿಗೆ ನಗದು ಪುರಸ್ಕಾರ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.















ಶ್ರೀಲಯ ಅವರು ಶ್ರೀಮತಿ ವಾಣಿ ಮತ್ತು ರಮೇಶ್ ಮಧುವನ ಅವರ ಪುತ್ರಿ.










