ಬೆಳ್ಳಾರೆಯ ಡಾ. ಕೆ. ಶಿವರಾಮ ಕಾರಂತ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ನಾತಕೋತ್ತರ ವಾಣಿಜ್ಯ ವಿಭಾಗ, ವಾಣಿಜ್ಯ ಸಂಘ ಹಾಗೂ ಆಂತರಿಕ ಗುಣಮಟ್ಟ ಕೋಶವು ಎ. ೧೬ ರಂದು ಒಂದು ದಿನದ ರಾಜ್ಯ ಮಟ್ಟದ ಕಾಮರ್ಸ್ ಹಾಗೂ ಮ್ಯಾನೇಜ್‌ಮೆಂಟ್ ಫೆಸ್ಟ್ “ಎಕ್ಸಲೆನ್ಷಿಯಾ ೨೦೨೫” ಅನ್ನು ವಿವಿಧ ಕಾಲೇಜುಗಳ ಸ್ನಾತಕ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಫೆಸ್ಟ್‌ನ ಉದ್ಘಾಟನೆಯನ್ನು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಕು. ಭಾಗೀರಥಿ ಮುರುಳ್ಯ ರವರು ನೆರವೇರಿಸಿದರು. ಮುಖ್ಯ ಅತಿಥಿಗಳಾದ ಐರಿಸ್ ಇವೆಂಟ್ಸ್ ಆಂಡ್ ಡೆಕೊರ್, ಮಂಗಳೂರು ಇದರ ಆಡಳಿತ ನಿರ್ದೇಶಕರಾದ ಶ್ರೀಮತಿ ಗುಣಶ್ರೀ ಉಮೇಶ್ ಕೊಟ್ಟೆಕಾಯ್‌ರವರು ಹಾಜರಿದ್ದರು.















ಸಂಜೆ ಜರುಗಿದ ಸಮಾರೋಪ ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಬಾಲಸುಬ್ರಮಣ್ಯ ಪಿ.ಎಸ್. ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಪೆರುವಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗನ್ನಾಥ ಪೂಜಾರಿ ಮುಕ್ಕೂರು, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗಾದ ಅಧ್ಯಕ್ಷರಾದ ಶ್ರೀಮತಿ ಉಷಾ ಬಿ. ಭಟ್, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಸಚಿನ್‌ರಾಜ್ ಶೆಟ್ಟಿ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಕ್ಷಿತ್ ಕುಮಾರ್ ಪೆರುವಾಜೆ ಇವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ರಾಜ್ಯ ಮಟ್ಟದ ಈ ಫೆಸ್ಟ್‌ನಲ್ಲಿ ರಾಜ್ಯದ ವಿವಿಧ ಪ್ರಥಮ ದರ್ಜೆ ಕಾಲೇಜುಗಳಿಂದ ೧೪ ತಂಡಗಳು ಭಾಗವಹಿಸಿದ್ದವು. ಎಲ್ಲಾ ಚಟುವಟಿಕೆಗಳಿಂದ ಸಮಗ್ರ ಪ್ರಶಸ್ತಿಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಹಾಗೂ ದ್ವಿತೀಯ ಪ್ರಶಸ್ತಿಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ಪುಂಜಾಲಕಟ್ಟೆ ಪಡೆದುಕೊಂಡವು.










