ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನವೋದಯ ಸಮವಸ್ತ್ರ ವಿತರಣೆ

0

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ 25ನೇ ವರ್ಷದ ರಜತ ಸಂಭ್ರಮದ ಪ್ರಯುಕ್ತ ಮರ್ಕಂಜ ವಲಯದ ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ ಕಾರ್ಯಕ್ರಮ ಏ.21ರಂದು ಮರ್ಕಂಜ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು.

ಸಮವಸ್ತ್ರ ವಿತರಣೆ ಕಾರ್ಯಕ್ರಮವನ್ನು ಸಂಘದ ಅಧ್ಯಕ್ಷರಾದ ದಯಾನಂದ ಪುರ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಬ್ಯಾಂಕಿನ ವಲಯ ಮೇಲ್ವಿಚಾರಕರಾದ ಮನೋಜ್ ಕುಮಾರ್ ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವಿನಯಕುಮಾರ್ ಸಂಘದ ಉಪಾಧ್ಯಕ್ಷ ಚೆನ್ನಕೇಶವ ದೋಳ ಹಾಗೂ ನಿರ್ದೇಶಕರು, ಸುಳ್ಯತಾಲೂಕು ಮೇಲ್ವಿಚಾರಕರಾದ ಶ್ರೀಧರ ಮಾಣಿಮರ್ದು, ವಲಯ ಪ್ರೇರಕಿ ಅನಿತಾ ಉಪಸ್ಥಿತರಿದ್ದರು.